ಗದಗ

ಸರ್ಕಾರಿ ಆಶ್ರಮ ಶಾಲೆ ಮುಚ್ಚಬೇಡಿ

Published On :

ಗಜೇಂದ್ರಗಡ: ಸ್ಥಳೀಯ ಸರ್ಕಾರಿ ಆಶ್ರಮ ಶಾಲೆ ಮುಚ್ಚದಿರಲು ಆಗ್ರಹಿಸಿ ಅಲೆಮಾರಿ ಜನಾಂಗ ವಿದ್ಯಾರ್ಥಿಗಳು ಎಸ್‌ಎಫ್‌ಐ ನೇತೃತ್ವದಲ್ಲಿ ವಿಶೇಷ ತಹಸೀಲ್ದಾರ್ ಕಾರ್ಯಾಲಯ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.
ಎಸ್‌ಎಫ್‌ಐ ನಗರ ಘಟಕ ಅಧ್ಯಕ್ಷ ಬಾಲಕೃಷ್ಣ ಜಾಡಬಂಡಿ ಮಾತನಾಡಿ, ಗುಳೆ ಹೋಗುವ ಅಲೆಮಾರಿ ಜನಾಂಗಗಳ ಮಕ್ಕಳಿಗೆ ಶಿಕ್ಷಣ ನೀಡಬೇಕೆಂಬ ಮಹತ್ವಾಕಾಂಕ್ಷೆ ಹೊಂದಿ 1965ರಲ್ಲಿ ಆರಂಭಗೊಂಡ ಈ ಶಾಲೆಯನ್ನು ಸರ್ಕಾರ ಮುಚ್ಚಲು ಹೊರಟಿರುವುದು ಖಂಡನೀಯ. ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ಸರ್ಕಾರ ಆಶ್ರಮ ಶಾಲೆ ಮುಚ್ಚುವ ಆದೇಶ ಕೈಬಿಡಬೇಕು. ಆಶ್ರಮ ಶಾಲೆಗೆ ಮೂಲಸೌಲಭ್ಯ ಕಲ್ಪಿಸಬೇಕು. ಜತೆಗೆ ಈಗಿರುವ ಶಾಲಾ ಸಿಬ್ಬಂದಿ ಬದಲಾವಣೆ ಮಾಡಿ ಶಾಲೆಗೆ ಕಾವಲುಗಾರರನ್ನು ನೇಮಿಸಬೇಕು ಎಂದರು.
ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಚ್.ಎಸ್. ಮೇಸ್ತಾ ಪ್ರತಿಭಟನಾ ನಿರತ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರಿಂದ ಅಹವಾಲು ಸ್ವೀಕರಿಸಿ ಬಳಿಕ ಮಾತನಾಡಿ, ಆಶ್ರಮ ಶಾಲೆಗೆ ಮಕ್ಕಳ ಹಾಜರಾತಿ ಕೊರತೆ ಹಿನ್ನೆಲೆಯಲ್ಲಿ ಈ ಶಾಲೆಯ ವಿದ್ಯಾರ್ಥಿಗಳನ್ನು ಬೇರೆಡೆ ವರ್ಗಾಯಿಸಲು ಇಲಾಖೆ ತೀರ್ಮಾನಿಸಿತ್ತು. ಜುಲೈ ಅಂತ್ಯದವರೆಗೆ ವಿದ್ಯಾರ್ಥಿಗಳ ಪ್ರವೇಶಾತಿ ನಡೆಯಲಿದೆ. ಅಷ್ಟರಲ್ಲಿ ಅಗತ್ಯ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಾದರೆ ಆಶ್ರಮ ಶಾಲೆ ಪ್ರಾರಂಭಿಸಲಾಗುವುದು. ಎಸ್‌ಎಫ್‌ಐ ವಿದ್ಯಾರ್ಥಿಗಳ ಪ್ರವೇಶಾತಿಗೆ ಇಲಾಖೆ ಜತೆ ಸಹಕರಿಸಬೇಕು ಎಂದರು.
ಇದೇ ಸಂದರ್ಭ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಮೂಲಕ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರಿಗೆ ಮನವಿ ಸಲ್ಲಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.