ಕೀಳು ಮಟ್ಟದ ರಾಜಕೀಯ ಸಲ್ಲ
ನರಗುಂದ: ನರಗುಂದ ವಿಧಾನಸಭಾ ಮತಕ್ಷೇತ್ರದ ಹಿರಿಯ ಶಾಸಕ ಬಿ.ಆರ್. ಯಾವಗಲ್ ಪುರಸಭೆ ಮತ್ತು ಪೊಲೀಸ್ ಇಲಾಖೆಯ ಡಿ ಗ್ರೂಪ್ ನೌಕರರು ಬಿಜೆಪಿ ಪರವಾಗಿದ್ದಾರೆಂದು ಅವರ ಹಿಂಬಾಲಕರ ಮಾತು ಕೇಳಿ ವರ್ಗಾವಣೆ ಮಾಡುವಂತಹ ಕೆಳಮಟ್ಟದ ರಾಜಕಾರಣ ಮಾಡುವುದು ಸಲ್ಲದು ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ ಆರೋಪಿಸಿದರು.
ಬುಧವಾರ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಮೊದಲು ಶಾಸಕರು ತಮ್ಮ ಹಿಂಬಾಲಕರ ಮಾತು ಕೇಳಿ ಸರ್ಕಾರಿ ನೌಕರರನ್ನು ವರ್ಗಾವಣೆಗೊಳಿಸುವಲ್ಲಿ ಕಾಲ ಕಳೆಯದೇ ಕ್ಷೇತ್ರಕ್ಕೆ ಸರ್ಕಾರದಿಂದ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿ. ಈ ಹಿಂದೆ ನಾನು ಅಧಿಕಾರದಲ್ಲಿದ್ದಾಗ ನರಗುಂದ ಪಟ್ಟಣದ ಜನತೆಗೆ ಕುಡಿಯುವ ನೀರಿನ ತೊಂದರೆ ನಿವಾರಣೆಗೆ ಅಂದಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದು ನರಗುಂದದಿಂದ ಮಲಪ್ರಭಾ ಜಲಾಶಯದವರಿಗೆ ಪೈಪ್ ಲೈನ್ ಮೂಲಕ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆಗೆ ರು. 30 ಕೋಟಿ ಮಂಜೂರು ಮಾಡಿಸಿದ್ದೆ. ಯಾವಗಲ್ ಶಾಸಕರಾದ ಮೇಲೆ ಹೆಚ್ಚವರಿಯಾಗಿ ಈ ಯೋಜನೆಗೆ ರು. 60 ಕೋಟಿ ಮಂಜೂರು ಮಾಡಿಸಿಕೊಂಡು ಬಂದು, ಈ ಯೋಜನೆ ನಾವು ಮಾಡಿದ್ದು ಎಂದು ಹೇಳುವುದು ಹಾಸ್ಯಾಸ್ಪದ ಎಂದು ಲೇವಡಿ ಮಾಡಿದರು. ಎಸ್.ಆರ್. ಹಿರೇಮಠ, ಪುರಸಭೆ ಅಧ್ಯಕ್ಷೆ ಜ್ಯೋತಿ ಪತ್ರಿ, ಉಪಾಧ್ಯಕ್ಷ ಕಿರಣ ಮುಧೋಳೆ, ಸದಸ್ಯ ಉಮೇಶ ಕುಡನ್ನವರ, ಪ್ರಕಾಶ ಪಟ್ಟಣಶಟ್ಟಿ, ವಾಸು ಜೋಗಣ್ಣವರ, ಟಿಎಪಿಎಂಸಿ ಅಧ್ಯಕ್ಷ ಎಫ್.ಆರ್. ಪಾಟೀಲ, ಜಿಪಂ ಸದಸ್ಯ ಎಂ.ಎಸ್. ಪಾಟೀಲ, ಎಪಿಎಂಸಿ ಅಧ್ಯಕ್ಷ ಅಜ್ಜಪ್ಪ ಹುಡೇದ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಬಿ.ಬಿ. ಐನಾಪುರ, ಡಾ. ಜಾಬಣ್ಣವರ, ಸಿ.ಎಸ್. ಸಾಲೂಟಿಗಿಮಠ, ಚಂದ್ರು ದಂಡಿನ, ಎಲ್.ಎಂ. ಪಾಟೀಲ, ಹಸನ ನವಲೆ, ಮಲ್ಲವ್ವ ಗುಂಜಾಳ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

