ಗದಗ

ರೇಲ್ವೆ ಉದ್ಯೋಗ ತರಬೇತಿ ಕೇಂದ್ರ ಸ್ಥಾಪಿಸಿ

Published On :

ಗದಗ: ಕನ್ನಡಿಗ ವಿದ್ಯಾವಂತ ನಿರುದ್ಯೋಗಿಗಳು ಸೂಕ್ತ ತರಬೇತಿಗಳಿಲ್ಲದೆ ರೇಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ವಂಚಿತರಾಗುತ್ತಿದ್ದು, ಈ ಭಾಗದವರಿಗೆ ರೇಲ್ವೆ ಇಲಾಖೆಯಲ್ಲಿ ಹೆಚ್ಚಿನ ಉದ್ಯೋಗ ದೊರಕಲು ಗದಗನಲ್ಲಿ ರೇಲ್ವೆ ಉದ್ಯೋಗ ತರಬೇತಿ ಕೇಂದ್ರ ಸ್ಥಾಪನೆಗೆ ಸಂಸದ ಶಿವಕುಮಾರ ಉದಾಸಿ ಆಸಕ್ತಿ ವಹಿಸಿ ಕೇಂದ್ರ ರೇಲ್ವೆ ಮಂತ್ರಾಲಯದ ಗಮನಕ್ಕೆ ತರಬೇಕೆಂದು ರಾಜ್ಯ ರೇಲ್ವೆ ಅಭಿವೃದ್ದಿ ಹೋರಾಟ ಸಮಿತಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಸವಣ್ಣೆಯ್ಯ ಹಿರೇಮಠ ಹೇಳಿದರು. ಪ್ರಕಟಣೆ ನೀಡಿರುವ ಅವರು, ಕರ್ನಾಟಕದಲ್ಲಿ ರೇಲ್ವೆ ಇಲಾಖೆಯಲ್ಲಿ ಡಿ ದರ್ಜೆಯಿಂದ ಉನ್ನತ ಮಟ್ಟದ ಹುದ್ದೆಗಳಲ್ಲಿ ಹೊರರಾಜ್ಯದವರೆ ಹೆಚ್ಚಿನ ಪ್ರಮಾಣದಲ್ಲಿ ಇದ್ದು, ಉ-ಕದಲ್ಲಿ ಇರುವುದಿಲ್ಲ. ಸೂಕ್ತ ತರಬೇತಿ ಇಲ್ಲದೇ ಕರ್ನಾಟಕದ ರೇಲ್ವೆ ಉದ್ಯೋಗಾಂಕ್ಷಿಗಳು ಅರ್ಜಿ ಸಲ್ಲಿಸಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿಫಲರಾಗುತ್ತಿದ್ದಾರೆ. ಹೊರ ರಾಜ್ಯಗಳಲ್ಲಿ ರೇಲ್ವೆ ಉದ್ಯೋಗ ತರಬೇತಿ ಪಡೆದುಕೊಂಡವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ರೇಲ್ವೆ ಉದ್ಯೋಗ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸಮಸ್ಯೆಯನ್ನು ಸಂಸದರು ಗಂಭೀರವಾಗಿ ಪರಿಗಣಿಸಿ ಗದಗನಲ್ಲಿ ರೇಲ್ವೆ ಉದ್ಯೋಗ ತರಬೇತಿ ಕೇಂದ್ರ ಸ್ಥಾಪಿಸಿ ನಿರುದ್ಯೋಗಿಗಳ ಹಿತ ಕಾಯಿರಿ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.