ಗದಗ

ಒಳಚರಂಡಿ ಯೋಜನೆ ಭೂಖರೀದಿ ಪ್ರಕ್ರಿಯೆಗೆ ಲಕ್ಷ್ಮೇಶ್ವರ ಪುರಸಭೆ ಅಸ್ತು

Published On :

ಲಕ್ಷ್ಮೇಶ್ವರ: ಪುರಸಭೆಯಲ್ಲಿ ಮಂಗಳವಾರ ಕರೆಯಲಾಗಿದ್ದ ಆಡಳಿತ ಮಂಡಳಿಯ ತುರ್ತುಸಭೆಯಲ್ಲಿ ಪಟ್ಟಣದ ಒಳಚರಂಡಿ ಯೋಜನೆಗೆ ನೇರ ಭೂಮಿ ಖರೀದಿ ಮಾಡುವ ಪ್ರಕ್ರಿಯೆಗೆ ಸರ್ವಸಮ್ಮತ ಒಪ್ಪಿಗೆ ನೀಡಲಾಯಿತು. ಸಭೆಯಲ್ಲಿ ಹಾಜರಿದ್ದ ಸರ್ವ ಸದಸ್ಯರ ಸಮ್ಮುಖದಲ್ಲಿ ಪಟ್ಟಣಕ್ಕೆ ಅವಶ್ಯವಾಗಿರುವ ಒಳಚರಂಡಿ ಯೋಜನೆಗೆ ಸರ್ಕಾರ ಮಂಜೂರಾತಿ ನೀಡಿದ್ದು, ಇದಕ್ಕೆ ಬೇಕಾಗಿರುವ ಜಮೀನು ಖರೀದಿ ಮಾಡುವ ಕುರಿತು ಚರ್ಚಿಸಲಾಯಿತು.
ಯೋಜನೆಗೆ ಒಟ್ಟು 17.6 ಎಕರೆ ಭೂಮಿಯನ್ನು ರೈತರಿಂದ ನೇರವಾಗಿ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಖರೀದಿಸಲು ತೀರ್ಮಾನಿಸಲಾಗಿದ್ದು, ರೈತರೂ ಇದಕ್ಕೆ ಒಪ್ಪಿದ್ದಾರೆ. ಪುರಸಭೆ ಶೀಘ್ರ ಭೂಮಿ ಖರೀದಿಸಿ, ಒಳಚರಂಡಿ ಯೋಜನೆಗೆ ಚಾಲನೆ ನೀಡುವ ಕುರಿತು ಸದಸ್ಯರು ಚರ್ಚಿಸಿ, ತಮ್ಮ ಒಪ್ಪಿಗೆ ಸೂಚಿಸಿದರು.
ಪಟ್ಟಣದಲ್ಲಿ ಹದಗೆಟ್ಟ ರಸ್ತೆಗಳ ಕುರಿತು ಸದಸ್ಯ ಮಹೇಶ ಹೊಗೆಸೊಪ್ಪಿನ ಸಭೆಗೆ ವಿವರಿಸಿದರು. ಇನ್ನೊಬ್ಬ ಸದಸ್ಯ ರಾಜೀವ ಕುಂಬಿ ಒಳಚರಂಡಿ ಯೋಜನೆ ಬಗ್ಗೆ ವಿವರ ನೀಡಿದರು. ಅಧ್ಯಕ್ಷೆ ಗಂಗಮ್ಮ ಫಕ್ಕೀರಸ್ವಾಮಿಮಠ, ಉಪಾಧ್ಯಕ್ಷ ಎಂ.ಆರ್. ಪಾಟೀಲ, ಸ್ಥಾಯಿ ಸಮಿತಿ ಅಧ್ಯಕ್ಷ ಗಂಗಾಧರ ಮ್ಯಾಗೇರಿ, ಹಿರಿಯ ಸದಸ್ಯ ವಿ.ಜಿ. ಪಡಗೇರಿ, ಜಯಕ್ಕ ಕಳ್ಳಿ, ದಾದಾಪೀರ ಮುಚಾಲೆ, ನಾಮನಿರ್ದೇಶಿತ ಸದಸ್ಯರು ಹಾಜರಿದ್ದರು.
ಮುಖ್ಯಾಧಿಕಾರಿ ಉಮೇಶ ಗುಡ್ಡದ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.