ಕಾಯಿಲೆ ತಡೆಯುವುದು ಆದ್ಯತೆಯಾಗಲಿ: ಡಾ. ಎಂ.ಬಿ. ಕುಲಕರ್ಣಿ
ಲಕ್ಷ್ಮೇಶ್ವರ: ರೋಗಗಳು ಬರದಂತೆ ತಡೆಗಟ್ಟುವುದು ನಮ್ಮ ಮೊದಲ ಆದ್ಯತೆಯಾಗಬೇಕು ಎಂದು ಪಟ್ಟಣದ ಅಗಡಿ ಸನ್ರೈಸ್ ಆಸ್ಪತ್ರೆಯ ಡಾ. ಎಂ.ಬಿ. ಕುಲಕರ್ಣಿ ಹೇಳಿದರು. ಪಟ್ಟಣದ ಅಗಡಿ ಸನ್ರೈಸ್ ಆಸ್ಪತ್ರೆಯಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಉಚಿತ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿ ಮಾತನಾಡಿದರು. ಶಿಬಿರದಲ್ಲಿ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಗರ್ಭಿಣಿ ಮತ್ತು ಸ್ತ್ರೀರೋಗ ಹಾಗೂ ಚಿಕ್ಕ ಮಕ್ಕಳ ಕಾಯಿಲೆಗಳಿಗೆ ಉಚಿತವಾದ ಚಿಕಿತ್ಸೆ, ತಜ್ಞರ ಸಲಹೆ, ತಪಾಸಣೆ ಮತ್ತು ಔಷಧಿ ವಿತರಿಸಲಾಯಿತು. ಅಗಡಿ ಸನ್ರೈಸ್ ಆಸ್ಪತ್ರೆಯ ವೈದ್ಯ ಡಾ. ಎಂ.ಬಿ. ಕುಲಕರ್ಣಿ, ಡಾ. ಪಿ.ಎಲ್. ಗದಗ, ಡಾ. ಬಿ.ಇ. ಕಾಳಿಂಗ, ಡಾ. ದೀಪಕ ಕುರಹಟ್ಟಿ, ರೇಷ್ಮಾ ರಾಥೋಡ, ದೀಪಾ, ಸರೋಜಾ ಹಾದಿಮನಿ ಮುಂತಾದ ವೈದರು ರೋಗಿಗಳನ್ನು ತಪಾಸಣೆ ಮಾಡಿದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಅರುಣ ಪಾಟೀಲ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಡಾ. ಪ್ರಕಾಶ ಗದಗ ಅವರು ಔಷಧಿ ಉಚಿತವಾಗಿ ವಿತರಿಸಿದರು. ಆಸ್ಪತ್ರೆಯ ಆಡಳಿತಾಧಿಕಾರಿ ಪರಶುರಾಮ ಕೆಂಚರಡ್ಡಿ ಹಾಗೂ ಸಿಬ್ಬಂದಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

