ಗದಗ

ಬೆಟಗೇರಿ ಕಾಲೇಜಿನಲ್ಲಿ ಮಣ್ಣೆತ್ತಿನ ಅಮಾವಾಸ್ಯೆ

Published On :

ಗದಗ: ಬೆಟಗೇರಿಯ ಮಹಾರಾಣಾ ಶಿಕ್ಷಣ ಸಂಸ್ಥೆಯ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶುಕ್ರವಾರ ಮಣ್ಣೆತ್ತಿನ ಅಮಾವಾಸ್ಯೆಯನ್ನು ವಿಶೇಷವಾಗಿ ಆಚರಿಸಲಾಯಿತು.
ಶಾಲಾ-ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ಸ್ವಯಂ ಪ್ರೇರಣೆಯಿಂದ ಮಣ್ಣನ್ನು ತಂದು ಉತ್ಸಾಹದಿಂದ ಮಣ್ಣಿನಿಂದ ಎತ್ತು (ಬಸವಣ್ಣ)ಗಳನ್ನು ಸಿದ್ಧಗೊಳಿಸುತ್ತಿರುವ ದೃಶ್ಯ ಆಕರ್ಷಣಿಯವಾಗಿತ್ತು. ಹಬ್ಬಗಳ ಮಹತ್ವ ವಿದ್ಯಾರ್ಥಿಗಳಲ್ಲಿ ರೂಢಿಸಿಕೊಳ್ಳುವುದು ಕೊರತೆಯಿಂದಾಗಿ ಗುರುತಿಸಿ ನಮ್ಮ ಸಂಸ್ಥೆಯಲ್ಲಿ ಇಂಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಬ್ಬದ ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿ ತಮ್ಮ ಸಂತಸ ವ್ಯಕ್ತಪಡಿಸಿದ್ದು ಶ್ಲಾಘನೀಯವೆಂದು ಮಹಾವಿದ್ಯಾಲಯದ ಪ್ರಾಚಾರ್ಯೆ ವೈ.ಆರ್. ಹಿರೇಗೌಡರ ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.