ಮಲೇರಿಯಾ ಜನಜಾಗೃತಿ ಜಾಥಾ
ಗಜೇಂದ್ರಗಡ: ಸ್ಥಳೀಯ ಪುರಸಭೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಗುರುವಾರ ಹಮ್ಮಿಕೊಂಡ ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ ಜನಜಾಗೃತಿ ಜಾಥಾಕ್ಕೆ ಪುರಸಭೆ ಅಧ್ಯಕ್ಷೆ ಕವಿತಾ ಜಾಲಿಹಾಳ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಮಲೇರಿಯಾ, ಡೆಂಘೀ, ಚಿಕೂನ್ ಗೂನ್ಯಾದಂತಹ ಮಾರಣಾಂತಿಕ ರೋಗಗಳ ಬಗೆಗೆ ಮುಂಜಾಗೃತಾ ಕ್ರಮಗಳ ಕುರಿತು ಸಾರ್ವಜನಿಕರು ಜಾಗೃತಿ ವಹಿಸಬೇಕು. ಈಗಾಗಲೇ ಪುರಸಭೆಯಿಂದ ಕರಪತ್ರಗಳ ಮೂಲಕ ಜಾಗೃತಿ ಮೂಡಿಸಲಾಗಿದೆ. ಮಲೇರಿಯಾ ನಿರ್ಮೂಲನೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮನೆ ಮತ್ತು ಸುತ್ತಲಿನ ಪರಿಸರ ಸ್ವಚ್ಛತೆಗೆ ಹೆಚ್ಚು ಗಮನ ಹರಿಸಬೇಕು ಎಂದರು.
ಆರೋಗ್ಯ ಇಲಾಖೆಯ ಅಧಿಕಾರಿ ವಿ.ಡಿ. ಬೆನ್ನೂರ ಮಾತನಾಡಿದರು. ಸ್ಥಳೀಯ ವಿವಿಧ ಶಾಲಾ ಮಕ್ಕಳಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಲೇರಿಯಾ ರೋಗಗಳ ಕುರಿತು ಜಾಗೃತಿ ಮೂಡಿಸಲಾಯಿತು. ಪುರಸಭೆ ಉಪಾಧ್ಯಕ್ಷೆ ಅಕ್ಕಮ್ಮ ಜಾನಾಯಿ, ಅಶೋಕ ವನ್ನಾಲ, ಎನ್.ಎಚ್. ಚೋಳಿನ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

