ವಸತಿ ರಹಿತರ ನಿರ್ಲಕ್ಷ್ಯ: ಜು. 7ರಿಂದ ಧರಣಿ
ಕನ್ನಡಪ್ರಭ ವಾರ್ತೆ, ಗದಗ, ಜೂ. 27
2 ವರ್ಷದಿಂದ ಗದಗ-ಬೆಟಗೇರಿ ನಗರದಲ್ಲಿ ವಸತಿ ರಹಿತರಾಗಿ ವಾಸಿಸುತ್ತಿರುವ ಬಡಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ನಿರಂತರ ಹೋರಾಟ ನಡೆಸುತ್ತ ಬಂದರೂ ಜಿಲ್ಲಾಡಳಿತ ವಸತಿ ರಹಿತರ ಬೇಡಿಕೆಗಳಿಗೆ ಸ್ಪಂದಿಸದೇ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಖಂಡಿಸಿ ಜು. 7ರಂದು ಜಿಲ್ಲಾಡಳಿತ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ನಗರದಲ್ಲಿ ಅನೇಕ ಕಡೆ ಸರ್ಕಾರಿ ಜಾಗೆಗಳನ್ನು ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ನಗರಸಭೆಯ ಆಸ್ತಿಗಳು ಖಾಸಗಿಯವರು ಕಬಳಿಸಿಕೊಂಡು ತಮ್ಮ ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಸಾರ್ವಜನಿಕರ ಉಪಯೋಗಕ್ಕಾಗಿ ಮೀಸಲಿಟ್ಟಿರುವ ಸರ್ಕಾರದ ಸಾಕಷ್ಟು ಭೂಮಿಯನ್ನು ಒತ್ತವರಿ ಮಾಡಲಾಗಿದೆ. ಜಿಲ್ಲಾಡಳಿತ ಅಂತಹವರ ಮೇಲೆ ಕ್ರಮ ಕೈಕೊಂಡಿಲ್ಲ. ಬಡವರ ವಸತಿಗಾಗಿ ಮೀಸಲಿಟ್ಟಿರುವ ಭೂಮಿಯನ್ನು ಬಡವರಿಗೆ ನೀಡುವುದನ್ನು ಬಿಟ್ಟು ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಪರವಾಗಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ನಗರದ ಬಡಜನರಿಗೆ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಇಚ್ಛಾಶಕ್ತಿ ತೋರಿಸದೇ ಬಡಜನರಿಗೆ ಅನ್ಯಾಯ ಮಾಡುತ್ತಿದ್ದಾರೆ.
ವಸತಿ ರಹಿತ ಬೇಡಿಕೆಗಳಿಗೆ ಆಗ್ರಹಿಸಿ ಸ್ಲಂ ಸಮಿತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿಗಳನ್ನು ನೀಡಲಾಗಿದೆ. ಆದರೂ ಸಚಿವರು ನಮ್ಮ ಬೇಡಿಕೆಗಳಿಗೆ ಗಮನ ನೀಡುತ್ತಿಲ್ಲ. ಆದ್ದರಿಂದ ಜು. 7ರ ಒಳಗಾಗಿ ನಗರದ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸದಿದ್ದಲ್ಲಿ ಅಂದಿನಿಂದ ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಜಿಲ್ಲಾಧಿಕಾರಿ ಬಡಜನರ ವಿರೋಧಿ ನೀತಿ ಖಂಡಿಸಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣ ಸಮಿತಿ ಅಧ್ಯಕ್ಷ ಅಶೋಕ ಮ್ಯಾಗೇರಿ, ಪ್ರಧಾನ ಕಾರ್ಯದರ್ಶಿ ಇಮ್ತಿಯಾಜ ಮಾನ್ವಿ, ಉಮಾದೇವಿ ಕಾತರಕಿ, ತಿಪ್ಪವ್ವ ಮುಟಗಾರ, ಆರತಿ ಎನ್. ಪರವೀನ ಬಡಿಗೇರ, ಅಶೋಕ ಕುಸಬಿ, ಇಬ್ರಾಹಿಂ ಮುಲ್ಲಾ, ಪರಶುರಾಮ ಕಾಳೆ, ಬಸವರಾಜ ಬಿಳೆಯಲಿ, ಅನೀಲ ಕಾಳೆ, ನಾಗರಾಜ ಮುಟಗಾರ, ಯುಸೂಫ್ ಮಜ್ಜಗಿ, ಮೇಹರುನ್ನಿಸಾ ಢಾಲಾಯತ, ಶಹಜಾನಬಿ ಕರ್ನಾಚಿ, ದ್ಯಾಮಣ್ಣ ಡೋಣಿ, ರಾಜು ಕಣಗಿನಹಾಳ, ರಾಜು ಭರಮಣ್ಣನವರ, ರಾಧಾ ಬೋಡಗಲ್ಲ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

