ನರಗುಂದಕ್ಕೆ ರಥಯಾತ್ರೆ ಇಂದು
ನರಗುಂದ: ಶ್ರೀಶೈಲದಿಂದ ಲೋಕ ಕಲ್ಯಾಣಕ್ಕಾಗಿ ಹೊರಟಿರುವ ರಥಯಾತ್ರೆ 28ರಂದು ನರಗುಂದಕ್ಕೆ ಆಗಮಿಸುವುದು. ಅದಕ್ಕೆ ಸಕಲ ಸಿದ್ಧತೆ ಪೂರ್ಣಗೊಳಿಸಲಾಗಿದೆ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ ಹೇಳಿದರು. ಅವರು ಗುರುವಾರ ಪಟ್ಟಣದ ಬಸವೇಶ್ವರ ಸಮುದಾಯ ಭವನದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಲ್ಯಾಣ ನಾಡಿಗಾಗಿ ಲೋಕ ಕಲ್ಯಾಣಕ್ಕೆ ಶ್ರೀಶೈಲದ ಭ್ರಮರಾಂಬಿಕಾ ಮಲ್ಲಿಕಾರ್ಜುನ ಶ್ರೀಗಳ ರಥಯಾತ್ರೆ ಬಾಗಲಕೋಟೆಯಿಂದ ನರಗುಂದಕ್ಕೆ ಶನಿವಾರ ಬೆಳಗ್ಗೆ 8ಕ್ಕೆ ಆಗಮಿಸುವುದು. ಈ ಸಂದರ್ಭದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಮತ್ತು ರಥಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ ಎಂದರು. ಈ ಸಂದರ್ಭದಲ್ಲಿ ಸಿ.ಎಚ್. ಕೋರಿ, ರಮೇಶಗೌಡ ಕರಕನಗೌಡ್ರ, ಬಿ.ಪಿ. ಚಿಕ್ಕಮಠ, ಜಿ.ಟಿ. ಗುಡಿಸಾಗರ, ಎಸ್.ಎ.ಅಂಗಡಿ ಹಾಜರಿದ್ದರು.
ಜಂಗಮಾಭಿವೃದ್ಧಿ ಸಂಘದ ಸಭೆ ನಾಳೆ
ಮುಂಡರಗಿ: ವೀರಮಾಹೇಶ್ವರ ಜಂಗಮಾಭಿವೃದ್ಧಿ ಸಂಘದ 2014ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಕುರಿತು ಜೂ. 29ರಂದು ಬೆಳಗ್ಗೆ 10ಕ್ಕೆ ಮುಂಡರಗಿ ಪಟ್ಟಣದ ಜ. ಅನ್ನದಾನೀಶ್ವರ ಜನರಲ್ ಹಾಸ್ಟೆಲ್ನಲ್ಲಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಮುಖ್ಯ ಘಟಕ, ಯುವ ಘಟಕ ಮತ್ತು ಮಹಿಳಾ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು. ಸಭೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗವಹಿಸುವರು. ಕಾರಣ ತಾಲೂಕಿನ ಎಲ್ಲ ಗ್ರಾಮಗಳ ಸಮಾಜ ಬಾಂಧವರು ಸಭೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ವಿ.ಆರ್. ಹಿರೇಮಠ (9901846972), ಎಸ್.ಬಿ. ಹಿರೇಮಠ (9986850594) ಮತ್ತು ಎ.ಜಿ. ಇಟಗಿಮಠ
(8095545177) ಅರನ್ನು ಸಂಪರ್ಕಿಸಲು ತಿಳಿಸಲಾಗಿದೆ.
ಇಂದು, ನಾಳೆ ವಿದ್ಯುತ್ ವ್ಯತ್ಯಯ
ಗದಗ: 110 ಕೆವಿ ಮುಂಡರಗಿ ವಿದ್ಯುತ್ ವಿತರಣಾ ಕೇಂದ್ರಲ್ಲಿ ಜೂ. 28 ಹಾಗೂ 29ರಂದು ಮುಂಡರಗಿ ವಿದ್ಯುತ್ ಗೋಪುರಗಳ ಮೇಲೆ 2ನೇ ಮಾರ್ಗವನ್ನು ನಿರ್ಮಿಸುವ ಕಾಮಗಾರಿಯನ್ನು ಪೂರ್ಣಗೊಳಿಸಲಾಗುತ್ತಿದ್ದು, ಕಾರಣ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಾರಣ ಎಲ್ಲ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳ 11 ಕೆವಿ ವಿತರಣಾ ಮಾರ್ಗಗಳಲ್ಲಿ ಹಾಗೂ 33 ಕೆವಿ ಶಿಂಗಟಾಲೂರು, 110 ಕೆವಿ ಉಪ್ಪಿನ ಬೆಟಗೇರಿ, ವಿ.ಎಸ್.ಟಿ.ಎಲ್. ಗಂಗಾಪುರ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಮುಂಡರಗಿ, ಶಿಂಗಟಾಲೂರು ಉಪಕೇಂದ್ರದಿಂದ ಗ್ರಾಮೀಣ ಪ್ರದೇಶಕ್ಕೆ ಬೆಳಗ್ಗೆ 5 ರಿಂದ 9 ಗಂಟೆಯ ವರೆಗೆ 3 ಫೇಸ್ ಪೂರೈಸಲಾಗುವುದು ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರ ಸಾಹಿತ್ಯ ಸಂಜೆ ಇಂದು
ಗದಗ: ಜೂ. 28ರಂದು ಸಂಜೆ 6ಕ್ಕೆ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗದಗ ತಾಲೂಕು ಪಂಚಾಯಿತಿ ಆವರಣದಲ್ಲಿ ಶನಿವಾರ ಸಾಹಿತ್ಯ ಸಂಜೆ ಮಾಲಿಕೆ ಕಾರ್ಯಕ್ರಮ ಜರುಗಲಿದೆ. ಗದುಗಿನ ಅರಟಾಳ ರುದ್ರಗೌಡ ಡಿ.ಇಡಿ. ಮಹಾವಿದ್ಯಾಲಯದ ಉಪನ್ಯಾಸಕಿ ವಿದ್ಯಾವತಿ ಅಕ್ಕಿ ಪಿ. ಲಂಕೇಶರ ಹುಳಿಮಾವಿನಮರ ಆತ್ಮಕಥನ- ಒಂದು ಅವಲೋಕನ ಕುರಿತು ಉಪನ್ಯಾಸ ನೀಡಲಿದ್ದಾರೆ. ಬೆಳಹೋಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗಿರೀಶ ಬಂಡಿಹಾಳ ಕವನ ವಾಚನ ಮಾಡಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಪ್ಪ ಕುರಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಕಸಾಪದ ಆಜೀವ ಸದಸ್ಯರು, ಸಾಹಿತ್ಯಾಭಿಮಾನಿಗಳು, ಕನ್ನಡಾಭಿಮಾನಿಗಳು, ಸಾಹಿತಿ, ಬರಹಗಾರರು, ಕಲಾವಿದರು, ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಜಿಲ್ಲಾ ಕಸಾಪ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

