ಗದಗ

ಭರವಸೆ: ಅಹೋರಾತ್ರಿ ಧರಣಿ ಅಂತ್ಯ

Published On :

ಗದಗ: ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಎದುರು ನಿವೇಶನಕ್ಕೆ ಆಗ್ರಹಿಸಿ ರೋಣ ತಾಲೂಕು ಬೆಳವಣಿಕಿ ಗ್ರಾಮದ ನಿವೇಶನ ವಂಚಿತರು ಕೈಗೊಂಡಿದ್ದ ಅಹೋರಾತ್ರಿ ಧರಣಿ ಜಿಲ್ಲಾ ಅಧಿಕಾರಿಗಳ ಭರವಸೆ ಮೇರೆಗೆ ವಾಪಸ್ ಪಡೆಯಲಾಯಿತು.
ಗುರುವಾರ ಡಿವೈಎಫ್‌ಐ ನೇತೃತ್ವದಲ್ಲಿ ಗ್ರಾಮದಿಂದ ಗದಗವರೆಗೆ ಪಾದಯಾತ್ರೆ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೈಗೊಂಡಿದ್ದರು. ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಧರಣಿಯ ನೇತೃತ್ವ ವಹಿಸಿದ್ದ ಮುಖಂಡರೊಂದಿಗೆ ಮಾತುಕತೆ ನಡೆಸಿ. ಗ್ರಾಪಂ ತಯಾರಿಸಿರುವ ನಿವೇಶನ ಫಲಾನುಭವಿಗಳ ಕುರಿತು ಕೂಲಂಕಷವಾಗಿ ಸಮೀಕ್ಷೆ ಮಾಡಲು 15 ದಿನಗಳ ವರೆಗೆ ಕಾಲಾವಕಾಶ ನೀಡಿದಲ್ಲಿ ಸಮಸ್ಯೆ ಬಗೆಹರಿಸಿ ಕೊಡುವುದಾಗಿ ಭರವಸೆ ನೀಡಿದ ಬಳಿಕ ಧರಣಿಯನ್ನು ಅಂತ್ಯಗೊಳಿಸಲಾಯಿತು. ಶುಕ್ರವಾರ ಧರಣಿ ಸ್ಥಳಕ್ಕೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಮುಖಂಡ ಎಸ್.ಎನ್. ಬಳ್ಳಾರಿ, ಆಟೋ ಚಾಲಕರ ಸಂಘದ ಅಧ್ಯಕ್ಷ ಪ್ರಜಾರ ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಬಿ.ಎಸ್. ಸೊಪ್ಪಿನ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.