ಲಕ್ಷ್ಮೇಶ್ವರದಲ್ಲಿ ಘರ್ಷಣೆ: ನಾಲ್ವರಿಗೆ ಗಾಯ
ಲಕ್ಷ್ಮೇಶ್ವರ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಪಟ್ಟಣದ ಒಂದು ಕೋಮಿನ ಎರಡು ಗುಂಪುಗಳ ನಡುವೆ ಕಲ್ಲು, ಬಾಟಲಿ, ಬಡಿಗಿ ಮತ್ತು ಮಾರಕಾಸ್ತ್ರಗಳಿಂದ ಹೊಡೆದಾಟ ಸಂಭವಿಸಿ ನಾಲ್ವರಿಗೆ ತೀವ್ರ ಗಾಯಗಳಾಗಿವೆ. 15ಕ್ಕೂ ಹೆಚ್ಚು ಜನರನ್ನು ಬಂಧಿಸಿರುವ ಘಟನೆ ಶುಕ್ರವಾರ ರಾತ್ರಿ ಪಟ್ಟಣದಲ್ಲಿ ನಡೆದಿದೆ. ಬಸ್ ನಿಲ್ದಾಣದ ಎದುರಿನಲ್ಲಿರುವ ಬಿಸ್ಮಿಲ್ಲಾ ಹೋಟೆಲ್ ಬಳಿ ನಡೆದ ಈ ಘರ್ಷಣೆಯು ವಿಕೋಪಕ್ಕೆ ತಿರುಗಿ ಅಲ್ಲಿಯೇ ಇದ್ದ ಬಾಟಲಿಗಳನ್ನು ತೂರಿದ್ದು, ನಂತರ ಕಲ್ಲು ತೂರಾಟದಲ್ಲಿ ತೊಡಗಿದ್ದರೆನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ ತಕ್ಷಣ ಅಲ್ಲಿಂದ ಓಡಿ ಹೋಗುವ ಪ್ರಯತ್ನದಲ್ಲಿದ್ದಾಗ, ಹೊಡೆದಾಟದಲ್ಲಿ ತೊಡಗಿದ್ದ ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಬಳಿ ಇದ್ದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸುಮಾರು 15-20 ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೊಡೆದಾಟದಲ್ಲಿ ನಾಲ್ವರಿಗೆ ತೀವ್ರ ಗಾಯಗಳಾಗಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ದೊರಕಿಸಿ ನಂತರ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಶಬ್ಬೀರ ಡಿ. ಮುಳಗುಂದ, ಮೈನುದ್ದೀನ್ ಆಡೂರ, ಅಬ್ದುಲ್ ಸತ್ತಾರ್ ಮೈ. ಆಡೂರ ಹಾಗೂ ಮಹ್ಮದಯಾಸಿನ್ ಶ. ಮುಳಗುಂದ ಎಂದು ಗುರುತಿಸಲಾಗಿದೆ. ಸಿಪಿಐ ಶ್ರೀನಿವಾಸ್ ಮೇಟಿ, ಪಿಎಸ್‌ಐ ವಿಕಾಸ ಲಮಾಣಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿ ತಿಳಿಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

