ಧರ್ಮ ರಥಯಾತ್ರೆಗೆ ಸ್ವಾಗತ
ನರಗುಂದ: ಶ್ರೀಶೈಲದಿಂದ ಲೋಕ ಕಲ್ಯಾಣಕ್ಕಾಗಿ ಆರಂಭಿಸಿರುವ ಧರ್ಮ ರಥಯಾತ್ರೆ ಶನಿವಾರ ನರಗುಂದಕ್ಕೆ ಆಗಮಿಸಿತು. ನಗರದ ಭಕ್ತರು ಕುಂಭ ಮೇಳದೊಂದಿಗೆ ಯಾತ್ರೆಯನ್ನು ಸ್ವಾಗತಿಸಿದರು.
ಮೆರವಣಿಗೆಗೆ ಚಾಲನೆ ನೀಡಿದ ಸಚಿವ ಸಿ.ಸಿ. ಪಾಟೀಲ ಮಾತನಾಡಿದರು. ಪಟ್ಟಣದ ಸೋಮಾಪುರದ ಮಾರುತೇಶ್ವರ ದೇವಸ್ಥಾನದಿಂದ ಹೊರಟ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಕುಂಭ ಮೇಳ, ಜಾಂಜ್, ರಗ್ಗಲಗಿ ಮೇಳ, ಡೊಳ್ಳು ಮೇಳಗಳ ಪಾಲ್ಗೊಂಡಿದ್ದವು. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಮಲ್ಲಿಕಾರ್ಜುನ ಪೆಟ್ರೋಲ್ ಬಂಕ್ನಿಂದ ರಥಯಾತ್ರೆಯನ್ನು ಬೀಳ್ಕೊಡಲಾಯಿತು. ಪುರಸಭೆ ಅಧ್ಯಕ್ಷೆ ಜ್ಯೋತಿ ಪತ್ರಿ, ಉಪಾಧ್ಯಕ್ಷ ಕಿರಣ ಮುಧೋಳೆ, ಸದಸ್ಯ ಉಮೇಶ ಕುಡನ್ನವರ, ಪ್ರಕಾಶ ಪಟ್ಟಣಶಟ್ಟಿ, ಚಂದ್ರು ಪವಾರ, ಶೈಲಾ ನರಗುಂದ, ಬಸಣ್ಣವ್ವ ಪಿಡ್ಡನಾಯ್ಕರ, ಮಲ್ಲವ್ವ ಗುಂಜಾಳ, ಸಿ.ಎಚ್. ಕೋರಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

