ಮಲೇರಿಯಾ ಬಗ್ಗೆ ಜಾಗ್ರತೆಇರಲಿ: ಡಾ. ವಸ್ತ್ರದ
ನರಗುಂದ: ಮಲೇರಿಯಾ ರೋಗದ ಬಗ್ಗೆ ಪ್ರತಿಯೊಬ್ಬರೂ ಜಾಗೃತಿ ವಹಿಸಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ವಿ.ಎಸ್. ವಸ್ತ್ರದ ಹೇಳಿದರು. ಅವರು ಸರ್ಕಾರ ಶಾಲೆ ನಂ. 2ರಲ್ಲಿ ಮಲೇರಿಯಾ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಲೇರಿಯಾ ತಡೆಗಟ್ಟಬೇಕೆಂದರೆ ನಮ್ಮ ಮನೆ, ಓಣೆ ಸುತ್ತ ಹೊಲಸು ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳಿರುವ ಪ್ರದೇಶಗಳಲ್ಲಿ ಈ ರೋಗ ಹರಡುತ್ತದೆ. ಜ್ವರ, ತಲೆನೋವು, ಮೈ, ಕೈ ನೋವು ಬರುತ್ತದೆ. ನಿರ್ಲಕ್ಷ್ಯ ಮಾಡಿದಲ್ಲಿ ಪ್ರಾಣಕ್ಕೆ ಆಪತ್ತು ಬರುವ ಸಾಧ್ಯತೆ ಇರುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷೆ ಜ್ಯೋತಿ ಪತ್ರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲೆ ನಂ. 2ರ ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ರೋಗ ತಡೆಗಟ್ಟುವಿಕೆ ಬಗ್ಗೆ ಘೋಷಣೆ ಮಾಡುತ್ತ ಜನತೆಗೆ ಮಾಹಿತಿ ನೀಡಿದರು. ಪಿ.ಎಫ್. ಸೊಲ್ಲಾಪುರಿ, ಎಸ್.ಜಿ. ಮಣ್ಣೂರಮಠ, ಎ.ಡಿ. ಕಲ್ಲಯ್ಯನಮಠ, ಎಸ್.ಬಿ. ಪಾಟೀಲ, ತಳವಾರ ಹಾಜರಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

