ಗದಗ

ರಾಷ್ಟ್ರೀಯ ಯುವ ಪ್ರಶಸ್ತಿಗೆ ಅರ್ಜಿ ಆಹ್ವಾನ

Published On :

ಗದಗ:  ಭಾರತ ಸರ್ಕಾರವು 2013-14ನೇ ಸಾಲಿಗೆ ರಾಷ್ಟ್ರ ಯುವ ಪ್ರಶಸ್ತಿಗಳಿಗಾಗಿ ಪ್ರಸ್ತಾವನೆಗಳನ್ನು ಆಹ್ವಾನಿಸಿದೆ.
 ಆಯ್ಕೆ ವಿಧಾನದ ವಿವರವಾದ ಮಾರ್ಗಸೂಚಿ ಪ್ರತಿಯನ್ನು ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಗದಗ ಕಾರ್ಯಾಲಯದಿಂದ ಪಡೆಯಬಹುದು. ಈ ಮಾರ್ಗಸೂಚಿಗಳನ್ವಯ 2013-14ನೇ ಸಾಲಿನಲ್ಲಿ ಯುವಜನ ಸೇವೆ, ರಾಷ್ಟ್ರೀಯ ಅಭಿವೃದ್ಧಿ ಮತ್ತು ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ 13 ರಿಂದ 35 ವರ್ಷದ ವಯೋವುತಿಯ ಯುವಕ ಯುವತಿಯರನ್ನು ಒಳಗೊಂಡ ಯುವಕ ಮತ್ತು ಯುವತಿ ಸಂಘಗಳು ಪ್ರಶಸ್ತಿಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
 ಇಂಥ ಪ್ರಸ್ತಾವನೆಗಳನ್ನು ವಿಶ್ವವಿದ್ಯಾಲಯ, ಕಾಲೇಜುಗಳು, ಸ್ಥಳೀಯ ಅಭಿವೃದ್ಧಿ ಇಲಾಖೆಗಳು, ರಾಷ್ಟ್ರಿಯ ಯುವ ಸಂಸ್ಥೆಗಳು ಖಾಸಗಿ ಸಂಸ್ಥೆಗಳು, ಸಾರ್ವಜನಿಕ ಸಂಸ್ಥೆಗಳು, ನೆಹರೂ ಯುವಕ ಕೇಂದ್ರಗಳು ಮತ್ತು ರಾಷ್ಟ್ರೀಯ ಯುವ ಸಂಸ್ಥೆಗಳು ಈ ಕಾರ್ಯಾಲಯಕ್ಕೆ ಕಳುಹಿಸಬಹುದು. ಅರ್ಜಿ ನಮೂನೆ ಮತ್ತು ಮಾರ್ಗಸೂಚಿಯನ್ನು ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಗದಗ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 15ರ ಸಂಜೆ 5.30 ರೊಳಗಾಗಿ ಸಂಬಂಧಿಸಿದ ದಾಖಲೆಗಳನ್ನು ಈ ಕಚೇರಿಗೆ ಸಲ್ಲಿಸಬೇಕು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.