ಗದಗ

ಚಿತ್ರಕಲೆಯಿಂದ ಸಮಾಜ ಜಾಗೃತಿ: ಜಿಲ್ಲಾಧಿಕಾರಿ ಪ್ರಸನ್ನಕುಮಾರ

Published On :

ಗದಗ: ಚಿತ್ರಕಲೆಯಿಂದ ಸಮಾಜದ ಜಾಗೃತಿ ಸಾಧ್ಯ ಮತ್ತು ಚಿತ್ರಕಲೆ ಜನರನ್ನು ಜಾಗೃತಿಗೊಳಿಸುವುದಕ್ಕೆ ಉತ್ತಮ ಮಾಧ್ಯಮವಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಹೇಳಿದರು. ಶನಿವಾರ ನಗರದ ವಿಜಯ ಕಲಾ ಮಂದಿರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಗದಗ ಹಾಗೂ ಮಕ್ಕಳ ರಕ್ಷಣಾ ಘಟಕ ಗದಗ, ಗದಗ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಹಾಗೂ ವಿಜಯ ಕಲಾ ಮಂದಿರ ಸಂಸ್ಥೆ ಆಶ್ರಯದಲ್ಲಿ ಬಾಲ್ಯ ವಿವಾಹ ತಡೆ ಜನ ಜಾಗೃತಿ ಕುರಿತು ಹಮ್ಮಿಕೊಂಡಿದ್ದ ಚಿತ್ರಕಲಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು. ಹತ್ತು ಪುಟಗಳಲ್ಲಿ ಹೇಳುವ ವಿಷಯವನ್ನು ಒಂದು ಚಿತ್ರದ ಮೂಲಕ ಪರಿಣಾಮಕಾರಿಯಾಗಿ ಹೇಳಬಹುದು. ಸಮಾಜದಲ್ಲಿ ಬಾಲ್ಯ ವಿವಾಹ, ವರದಕ್ಷಿಣೆ ಪಿಡುಗು, ಮೂಢನಂಬಿಕೆ ಇತರೆ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ಜನರಲ್ಲಿ ಜಾಗೃತಿ ಮೂಡಿಸುವಂಥ ಕಲಾಕೃತಿಗಳನ್ನು ಚಿತ್ರ ಕಲಾವಿದರು ರಚಿಸುವಲ್ಲಿ ಮುಂದಾಗಬೇಕು ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ವಿ. ರಾಜೇಂದ್ರ ಪ್ರಸಾದ, ಮಕ್ಕಳ ರಕ್ಷಣಾ ಘಟಕ ಅಧಿಕಾರಿ ಭಾರತಿ ಶೆಟ್ಟರ್ ಪ್ರಾಸ್ತಾವಿಕ ಮಾತನಾಡಿದರು. ಪ್ರಾಚಾರ್ಯರಾದ ಪ್ರೇಮಾ ಹಿರೇಮಠ, ಡಾ. ಬಿ.ಎಲ್. ಚವ್ಹಾಣ, ಹಿರಿಯ ಕಲಾವಿದ ಕೆ.ವಿ. ಕುಂದಗೋಳ, ವಿಜಯ ಕಲಾ ಮಂದಿರದ ಮುಖ್ಯಸ್ಥ ಪ್ರಕಾಶ ಅಕ್ಕಿ, ಜಿ.ಸಿ. ರೇಷ್ಮೇ, ಉಪನ್ಯಾಸಕ ಕೆ.ಎಂ. ಕೃಷ್ಣ. ಬಿ.ಜಿ. ನೇಲಜೆರಿ, ಬಿ.ಎಚ್. ಶರಣಪ್ಪ, ಬಿ.ಸಿ. ಕುತ್ನಿ ಇತರರಿದ್ದರು. ಶಿಬಿರದಲ್ಲಿ ಜಿಲ್ಲೆಯಲ್ಲಿ ಆಯ್ದ 20 ಚಿತ್ರಕಲಾ ಶಿಕ್ಷಕರು ಭಾಗವಹಿಸಿ ಶಿಬಿರದ ಯಶಸ್ಸಿಗೆ ಶ್ರಮಿಸಿದರು. ಚಿತ್ರಕಲಾ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಶಹಜಾನ್ ಮುದಕವಿ ಸ್ವಾಗತಿಸಿ, ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.