ಗದಗ

ನಿರುದ್ಯೋಗ ನಿವಾರಣೆಗೆ ಮೋದಿ ಆದ್ಯತೆ: ಉದಾಸಿ

Published On :

ಗಜೇಂದ್ರಗಡ: ನಿರುದ್ಯೋಗ ಸಮಸ್ಯೆ ನಿವಾರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆದ್ಯತೆ ನೀಡಿದ್ದಾರೆ. ಕೈಕೆಲಸವಿಲ್ಲದ ಪದವೀಧರರಿಗೆ ಉದ್ಯೋಗ ಸೃಷ್ಟಿಸುವ ಮಹತ್ವದ ಯೋಜನೆಯನ್ನು ಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ ಎಂದು ಸಂಸದ ಶಿವಕುಮಾರ ಉದಾಶಿ ಹೇಳಿದರು.
ಸ್ಥಳೀಯ ಜಿ.ಕೆ. ಬಂಡಿ ಗಾರ್ಡನ್‌ನಲ್ಲಿ ಸೋಮವಾರ ನಡೆದ ಬಿಜೆಪಿ ಕಾರ್ಯಕರ್ತರ ಹಾಗೂ ಮತದಾರರ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿತರಾಗಿ ಮಾತನಾಡಿದರು.
ಅಸಂಖ್ಯಾತ ಪದವೀಧರ ಬಾಳಿಗೆ ನೆರವಾಗುವ ಯೋಜನೆ ರೂಪುರೇಷೆ ಸಿದ್ಧವಾಗುತ್ತಿದೆ. ಕೈಗಾರಿಕೆಗಳ ಸ್ಥಾಪನೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ. ಇದರಿಂದ ಸಾಕಷ್ಟು ಉದ್ಯೋಗ ಸೃಷ್ಟಿಯಾಗಿ ದೇಶವು ಆರ್ಥಿಕವಾಗಿ ಸಬಲವಾಗಲಿದೆ ಎಂದರು.
ಸಮಾರಂಭ ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಕಳಕಪ್ಪ ಬಂಡಿ ಮಾತನಾಡಿ, ಗದಗದಿಂದ ವಾಡಿ ಮಾರ್ಗಕ್ಕೆ ಸಂಚಾರದ ನೂತನ ರೈಲು ಮಾರ್ಗವನ್ನು ಮಾರ್ಪಡಿಸಿದ್ದರಿಂದ ಗಜೇಂದ್ರಗಡ ಭಾಗದ ಜನತೆಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸಿ ಗಜೇಂದ್ರಗಡಕ್ಕೆ ರೈಲು ತರುವ ವ್ಯವಸ್ಥೆ ಸಂಸದರು ಮಾಡಬೇಕು ಎಂದು ಮನವಿ ಮಾಡಿದರು. ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಸಚಿವ ಸಿ.ಸಿ. ಪಾಟೀಲ ಮಾತನಾಡಿದರು.
ಬಿಜೆಪಿ ರೋಣ ಮಂಡಲ ಅಧ್ಯಕ್ಷ ಸೋಮಶೇಖರ ಚನ್ನಳ್ಳಿ ಅಧ್ಯಕ್ಷತೆ ವಹಿಸಿದ್ದರು. ರಮೇಶ ಮುಂದಿನಮನಿ, ತಿಮ್ಮಣ್ಣಾ ವನ್ನಾಲ, ಅಶೋಕ ನವಲಗುಂದ, ರಾಜೇಶ್ವರಿ ಚೆನ್ನು ಪಾಟೀಲ, ಬಿ.ಎಂ. ಸಜ್ಜನ, ಸಿದ್ದಪ್ಪ ಬಂಡಿ, ಬಿಜೆಪಿ ನಗರ ಘಟಕ ಅಧ್ಯಕ್ಷ ಭಾಸ್ಕರ ರಾಯಬಾಗಿ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.