ಎಲ್ಲ ಜನಾಂಗಕ್ಕೂ ಸೌಲಭ್ಯ ನೀಡಲು ಬದ್ಧ
ಕನ್ನಡಪ್ರಭ ವಾರ್ತೆ, ಗದಗ, ಮಾ. 3
ಎಲ್ಲ ವರ್ಗದ ಜನಾಂಗಗಳಿಗೆ ಸೌಲಭ್ಯ ನೀಡುವ ನಿಟ್ಟಿನಲ್ಲಿ ಸರ್ಕಾರ ಉತ್ತಮ ಕಾರ್ಯಗಳನ್ನೂ ರೂಪಿಸಿದೆ ಎಂದು ನರಗುಂದ ಶಾಸಕ ಬಿ.ಆರ್. ಯಾವಗಲ್ ಹೇಳಿದರು.
ಅವರು ತಾಲೂಕಿನ ಸಂಭಾಪುರ ಗ್ರಾಮದ ಹರಿಜನ, ಗಿರಿಜನ ಕಾಲೋನಿಯಲ್ಲಿ ಈಚೆಗೆ ನಿರ್ಮಿತಿ ಕೇಂದ್ರ ರು. 10 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಮತಕ್ಷೇತ್ರದ ವ್ಯಾಪ್ತಿಯು ವಿಶಾಲವಾಗಿದ್ದು, ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಂತ ಹಂತವಾಗಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ರೂಪಿಸುವುದಾಗಿ ತಿಳಿಸಿದರು. ಬದಲಾದ ತಕ್ಕಂತೆ ನಾವು ಹೊಂದಿಕೊಳ್ಳಬೇಕಾಗಿದೆ. ಎಷ್ಟೇ ಕಷ್ಟವಾದರೂ ಕೃಷಿ ಚಟುವಟಿಕೆ ಮರೆಯಬಾರದು ಎಂದು ರೈತರಿಗೆ ತಿಳಿಸಿ, ಇಲ್ಲಿಯ ಸಮಸ್ಯೆಗಳ ಬಗೆಗೆ ಕೂಲಕುಂಷವಾಗಿ ಚರ್ಚಿಸಿ ಸೂಕ್ತ ತೀರ್ಮಾನ ಮಾಡಲಾಗುವುದು. ಇಂದಿನ ದಿನಗಳಲ್ಲಿ ಸಾಕಷ್ಟು ಒತ್ತಡಗಳ ಮಧ್ಯೆ ವಿವಿಧ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಗ್ರಾಮಸ್ಥರು ಸಹಕಾರ ನೀಡಬೇಕು ಎಂದರು. ಶ್ಯಾಮರಡ್ಡಿ ಬಂಡಿ ಮಾತನಾಡಿ, ಬಡ ರೈತರ ಕೃಷಿ ಜಮೀನುಗಳು ರಾಷ್ಟ್ರೀಯ ಹೆದ್ದಾರಿ ಹಾಗೂ ಕಾಲುವೆ ನಿರ್ಮಾಣಕ್ಕೆ ಹೋಗಿವೆ. ಹೀಗಾಗಿ ರೈತರಿಗೆ ತುಂಬಾ ನಷ್ಟ ಉಂಟಾಗಿದೆ. ರೈತರ ಅನುಕೂಲಕ್ಕಾಗಿ ಹೆಚ್ಚಿನ ಅನುದಾನ ನೀಡಿ ಅವರ ಜೀವನಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಯೋಚಿಸಿರಿ ಹಾಗೂ ಸಂಭಾಪುರದಿಂದ ಗದಗ ವರೆಗೆ ರಸ್ತೆ ತುಂಬಾ ಹಾಳಾಗಿದ್ದು, ಕೂಡಲೇ ಸರಿಪಡಿಸುವ ಕಾರ್ಯ ಹಮ್ಮಿಕೊಳ್ಳಬೇಕು ಎಂದರು. ತಾಪಂ ಅಧ್ಯಕ್ಷ ಹನುಮಂತಪ್ಪ ಇಂಗಳಳ್ಳಿ, ಗ್ರಾಪಂ ಉಪಾಧ್ಯಕ್ಷ ಕೆ.ಎನ್. ಬಂಡಿ ಮಾತನಾಡಿದರು. ನಿಂಗನಗೌಡ ಬಂಡಿ, ಶ್ರೀನಿವಾಸ, ದೇಸಾಯಿಗೌಡ್ರ, ಎಪಿಎಂಸಿ ಉಪಾಧ್ಯಕ್ಷ ಸಿದ್ದಲಿಂಗೇಶ ಪಾಟೀಲ, ಬರಮರಡ್ಡಿ ಬಂಡಿ, ನೀಲಪ್ಪ ಡೋಣಿ, ಗೋವಿಂದಪ್ಪ ಕುರಬರ, ದುರ್ಗಾದೇವಿ ಟ್ರಸ್ಟ್ ಕಮಿಟಿ ಪದಾಧಿಕಾರಿಗಳು, ಮುಂತಾದವರು ಉಪಸ್ಥಿತರಿದ್ದರು. ಅಂದಾನಯ್ಯ ಹಿರೇಮಠ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

