ಗದಗ

ಬೆಂಗಳೂರಿನಲ್ಲಿ ಉ.ಕ. ಜನರ ಕಡೆಗಣನೆ

Published On :

ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಮಾ. 3
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕ ಜನರನ್ನು ಕಡೆಣಿಸಲಾಗುತ್ತಿದೆ. ವೈಯಕ್ತಿಕ ಹಾಗೂ ಇನ್ನಿತರ ಯಾವುದೇ ಕೆಲಸ ಕಾರ್ಯಕ್ಕೆ ಒಬ್ಬೊಬ್ಬರಾಗಿ ಕೇಳಿದರೆ ಕೆಲಸ ಮಾಡಿಕೊಡುವುದಿಲ್ಲ. ಸಂಘಟನೆ ಮೂಲಕ ಒತ್ತಡ ಹಾಕಿದಾಗ ಮಾತ್ರ ಕೆಲಸ ಮಾಡಿ ಕೊಡುವಂತಹ ದುಸ್ಥಿತಿ ಇದೆ ಎಂದು ವಿಪಕ್ಷ ನಾಯಕ ಜಗದೀಶ ಶೆಟ್ಟರ್ ಹೇಳಿದರು.
ಅವರು ಸೋಮವಾರ ಸ್ಥಳೀಯ ಎಪಿಎಂಸಿ ಎದುರಿನ ಬಯಲು ಜಾಗದಲ್ಲಿ ನಿರ್ಮಿಸಿದ ವೇದಿಕೆಯಲ್ಲಿ ಕರ್ನಾಟಕ ಜನಹಿತ ವೇದಿಕೆ ಸ್ಥಾಪನೆ ಹಾಗೂ ಪಂಡಿತ ಡಾ. ಪುಟ್ಟರಾಜ ಕವಿ ಗವಾಯಿಗಳ ಜನ್ಮ ಶತಮಾನೋತ್ಸವ ಪ್ರಯುಕ್ತ ನಡೆದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ವಧರ್ಮ ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಶಾಂತಿ, ನೆಮ್ಮದಿ ಬದುಕಿಗೆ ನಾಂದಿಹಾಡಲಿವೆ ಎಂದರು. ಸಂಸದ ಶಿವಕುಮಾರ ಉದಾಸಿ ಮಾತನಾಡಿದರು. ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು, ಬಸವಕೇಂದ್ರ ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು, ಮೈಸೂರು ಸಂಸ್ಥಾನ ಮಠದ ವಿಜಯ ಮಹಾಂತ ಶ್ರೀಗಳು, ಕಾಗಿನೆಲೆ ಸಂಸ್ಥಾನಮಠದ ಸಿದ್ಧರಾಮನಂದಪುರಿ ಶ್ರೀಗಳು, ರೇವಣಸಿದ್ಧೇಶ್ವರ ಸಂಸ್ಥಾನ ಮಠ ಮನಸೂರಿನ ಬಸವರಾಜ ದೇವರು, ತೂಬಿನಕಟ್ಟಿ ಸಂಸ್ಥಾನಮಠ, ಅಮರೇಶ್ವರಗುರು ಗಜದಂಡ ಶಿವಾಚಾರ್ಯರು, ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು, ವೀರಸಂಗಮೇಶ್ವರ ಶಿವಾಚಾರ್ಯರು, ಕೊಡಗಾನೂರ ಚಂದ್ರಶೇಖರ ಹಿರೇಮಠ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಇದೇ ಸಂದರ್ಭದಲ್ಲಿ 54 ಜೋಡಿ ವಧು-ವರರು ಸಪ್ತಪದಿ ತುಳಿದು ದಾಂಪತ್ಯ ಬದುಕಿಗೆ ಕಾಲಿಟ್ಟರು. ಚಿತ್ರನಟ ವಿಜಯ ರಾಘವೇಂದ್ರ, ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ, ಸ್ನೇಹಾ ಮಹಿಳಾ ಮಂಡಳ ಅಧ್ಯಕ್ಷೆ ಸಂಯುಕ್ತಾ ಬಂಡಿ, ಪುರಸಭೆ ಅಧ್ಯಕ್ಷೆ ಕವಿತಾ ನಾಗರಾಜ ಜಾಲಿಹಾಳ, ಭಾಸ್ಕರ ರಾಯಬಾಗಿ, ಅಂಬರೀಷ್ ಬಳಿಗೇರ ಮುಂತಾದವರು ಉಪಸ್ಥಿತರಿದ್ದರು. ಬೆಳಗ್ಗೆ ದುರ್ಗಾವೃತ್ತದಿಂದ ತಾಯಿ ಭುವನೇಶ್ವರಿ ಹಾಗೂ ಪುಟ್ಟರಾಜ ಗವಾಯಿಗಳ ಭಾವಚಿತ್ರ ಮೆರವಣಿಗೆ ಜನಮನ ಸೆಳೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.