ಗದಗ

ಮಹಿಳೆಯರು ಸಂಘಟಿತರಾಗುವುದು ಅತ್ಯವಶ್ಯ

Published On :

ಗಜೇಂದ್ರಗಡ: ಮಹಿಳಾ ಸಮುದಾಯದಲ್ಲಿನ ಸಂಘಟನೆ ಕೊರತೆಯಿಂದಾಗಿ ಸಮಾಜದಲ್ಲಿ ಮಹಿಳೆ ಶೋಷಣೆಗೊಳಪಡುವುದು ಅನಿವಾರ್ಯ. ಈ ನಿಟ್ಟಿನಲ್ಲಿ ಮಹಿಳೆಯರು ಸಂಘಟಿತರಾಗುವುದು ಅವಶ್ಯ ಎಂದು ಸ್ನೇಹಾ ಮಹಿಳಾ ಮಂಡಳದ ಅಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು.
ಅವರು ಸ್ಥಳೀಯ ಗವಿಮಠದಲ್ಲಿ ಈಚೆಗೆ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ನಡೆದ ಮಹಿಳಾ ಜ್ಞಾನ ವಿಕಾಸ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರಲ್ಲಿನ ಸಹನೆ ತಾಳ್ಮೆಯನ್ನು ಸಮಾಜದ ಕೆಲ ವ್ಯಕ್ತಿಗಳು ತಮ್ಮ ಸ್ವಾರ್ಥ ಸಾಧನವನ್ನಾಗಿ ಬಳಕೆ ಮಾಡಿಕೊಳ್ಳುವುದರ ಪರಿಣಾಮ ಮಹಿಳೆ ಸಮಾಜದ ಮುಖ್ಯವಾಹಿನಿಗೆ ಬರುವಲ್ಲಿ ವಿಳಂಬವಾಗುತ್ತಿದೆ. ಇಂತಹ ನ್ಯೂನತೆಗಳನ್ನು ತೊಲಗಿಸಲು ಪ್ರಜ್ಞಾವಂತ ಪುರುಷ ಸಮುದಾಯ ಮಹಿಳೆಯರ ಪ್ರಗತಿಗೆ ಚಿಂತಿಸುವ ಅಗತ್ಯವಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷೆ ಕವಿತಾ ಜಾಲಿಹಾಳ ಮಾತನಾಡಿ, ಸಮಾಜದಲ್ಲಿ ಪುರುಷರಷ್ಟೇ ಮಹಿಳೆಯರೂ ಸಮಾನತೆಯ ಹಕ್ಕು ಹೊಂದಿದ್ದಾರೆ. ಈ ದೆಸೆಯಲ್ಲಿ ಸರ್ಕಾರ ನೀಡಿರುವ ಸೌಲಭ್ಯ ಪಡೆದು ಆರ್ಥಿಕ, ಸಾಮಾಜಿಕವಾಗಿ ಸ್ವಾವಲಂಬಿ ಜೀವನ ಸಾಗಿಸುವ ಛಲ ಹೊಂದಿ ಎಂದರು. ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಪದ್ಮಾವತಿ ಗೌಡರ, ವಲಯ ಮೇಲ್ವಿಚಾರಕ ಲೋಹಿತ್ ಎಚ್., ಪದ್ಮಾವತಿ ಬಡಿಗೇರ, ಬಸಮ್ಮ ಮೀರಾಬಾಯಿ, ಗೀತಾ ಪಾಗಿ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.