ಪುಟ್ಟರಾಜ ಶ್ರೀಗಳಿಗೆ ಭಾರತರತ್ನ ನೀಡಲಿ
ಗದಗ: ಲಿಂ. ಪದ್ಮಭೂಷಣ, ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಕೆಎಸ್‌ಎಸ್ ಕಾಲೇಜಿನ ಉಪನ್ಯಾಸಕ ಡಾ. ಶರಣಬಸವ ವೆಂಕಟಾಪುರ ಹೇಳಿದರು.
ಅವರು ಸೋಮವಾರ ಸಂಜೆ ಸ್ಥಳೀಯ ವೀರೇಶ್ವರ ಪುಣ್ಯಾಶ್ರಮದಲ್ಲಿ ಜರುಗಿದ ಪದ್ಮಭೂಷಣ ಲಿಂ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ 100ನೇ ಜಯಂತ್ಯುತ್ಸವದಲ್ಲಿ ಉಪನ್ಯಾಸ ನೀಡಿದರು. ಪಂ. ಪುಟ್ಟರಾಜ ಕವಿ ಗವಾಯಿಗಳವರು ನಾದ, ಜ್ಞಾನ ಮತ್ತು ಆಧ್ಯಾತ್ಮದ ಸಂಗಮವಾಗಿದ್ದರು. ಸಂಗೀತದ ಪರ್ವತವಾಗಿದ್ದರು. ಹೀಗಾಗಿ ಅವರ ಕೃತಿಗಳನ್ನು ಸರ್ಕಾರ ಪ್ರಕಟಿಸುವ ಮೂಲಕ ಪುಟ್ಟರಾಜ ಕವಿ ಗವಾಯಿಗಳವರ ಜನ್ಮಶತಮಾನೋತ್ಸವವನ್ನು ವರ್ಷಪೂರ್ತಿ ಸರ್ಕಾರ ಆಚರಿಸುವಂತಾಗಬೇಕು ಎಂದರು.
ಬಳಗಾನೂರು ಚಿಕೇನುಕೊಪ್ಪದ ಶಿವಶಾಂತವೀರ ಶ್ರೀಗಳು ಮಾತನಾಡಿ, ಅಂಧರ ಬಾಳಿಗೆ ಬೆಳಕು ನೀಡಿ ಅವರಲ್ಲಿ ಸ್ವಾಭಿಮಾನವನ್ನು ತುಂಬಿದ ಲಿಂ. ಪುಟ್ಟರಾಜ ಕವಿ ಗವಾಯಿಗಳವರ ಬದುಕು ಆದರ್ಶವಾಗಿದ್ದು ಅದನ್ನು ಬದುಕಿನಲ್ಲಿ ಅಳವಡಿಕೊಂಡರೆ ಉತ್ತಮವಾದ ಸಮಾಜ ಸೇವೆಯನ್ನು ಮಾಡಿದಂತಾಗುವುದೆ ಎಂದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಬೂದೀಶ್ವರ ಶ್ರೀಗಳು ಮಾತನಾಡಿ, ಅಂಧರಿಗೆ ಶಾಶ್ವತವಾದ ಸ್ಥಾನ ಕಲ್ಪಿಸಿದ್ದು ಲಿಂ. ಪುಟ್ಟರಾಜ ಕವಿ ಗವಾಯಿಗಳವರು ಅವರ ಬದುಕೇ ಒಂದು ಪ್ರೇರಣೆ. ಅವರ ಸಾಧನೆ ಸರ್ವ ಕಾಲಕ್ಕೂ ಸರ್ವರಿಗೂ ದಾರಿ ದೀಪವಾಗಿದೆ ಎಂದರು.
ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಸಮ್ಮುಖ ವಹಿಸಿದ್ದರು. ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ, ಎಸ್ಪಿ ಡಾ. ಎಸ್.ಡಿ. ಶರಣಪ್ಪ ಹಾಗೂ ಸಿಇಒ ವೀರಣ್ಣ ತುರಮರಿ ಅವರನ್ನು ಸನ್ಮಾನಿಸಲಾಯಿತು. ವೀರೇಶ್ವರ ಪುಣ್ಯಾಶ್ರಮದ ವ್ಯವಸ್ಥಾಪಕ ಬಸವರಾಜ ಹಿಡ್ಕಿಮಠ, ಪಿ.ಸಿ. ಹಿರೇಮಠ, ಸಂಗಮೇಶ ದುಂದೂರ, ಪರಶುರಾಮ ಕಟ್ಟಿಮನಿ, ಪಿ.ಆರ್. ಮಾಳೆಕೊಪ್ಪಮಠ ಮುಂತಾದವರು ಉಪಸ್ಥಿತರಿದ್ದರು. ವೀರೇಶ್ವರ ಪುಣ್ಯಾಶ್ರಮ ಸೋಲ್ ಟ್ರಸ್ಟ್‌ನ ಅಧ್ಯಕ್ಷ ನಿಂಗಪ್ಪ ಕೆಂಗಾರ ಸ್ವಾಗತಿಸಿದರು. ವಿ.ಎಂ. ಗುರುಮಠ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

