ಬೆಂಕಿ ಆಕಸ್ಮಿಕದಿಂದ ಕಪ್ಪತ್ತಗುಡ್ಡ ರಕ್ಷಿಸಲು ಕ್ರಮ: ಶಾಸಕ ರಾಮಕೃಷ್ಣ ದೊಡ್ಡಮನಿ
ಮುಂಡರಗಿ: ನೂರಾರು ಎಕರೆ ಪ್ರದೇಶದಲ್ಲಿ ಹಬ್ಬಿರುವ ಕಪ್ಪತ್ತಗುಡ್ಡವನ್ನು ರಕ್ಷಿಸುವ ನಿಟ್ಟಿನಲ್ಲಿ ಇಡಿ ಗುಡ್ಡದ ಸುತ್ತಲೂ 3 ಮೀಟರ್ ಆಳ ಹಾಗೂ 3 ಮೀಟರ್ ಅಗಲದ ಬೃಹತ್ ಗುಂಡಿಗಳನ್ನು ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆ ಮೂಲಕ ಕಪ್ಪತ್ತಗುಡ್ಡವನ್ನು ಜನ, ಜಾನುವಾರು ಮತ್ತು ಬೆಂಕಿ ಆಕಸ್ಮಿಕಗಳಿಂದ ರಕ್ಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಮಂಗಳವಾರ ಪಟ್ಟಣದ ಅನ್ನದಾನೀಶ್ವರ ಸಭಾಭವನದಲ್ಲಿ ಸ್ಥಳೀಯ ಕ.ರಾ. ಬೆಲ್ಲದ ಮಹಾವಿದ್ಯಾಲಯ ಮತ್ತು ಅರ್ಥಶಾಸ್ತ್ರ ಸ್ನಾತಕೋತ್ತರ ಕೇಂದ್ರ, ವಲಯ ಅರಣ್ಯಾಧಿಕಾರಿಗಳ ಕಾರ್ಯಾಲಯ ಹಾಗೂ ಕಪ್ಪತ್ತಗುಡ್ಡ ಪರಿಸರ ಸಂರಕ್ಷಣಾ ವೇದಿಕೆಗಳ ಆಶ್ರಯದಲ್ಲಿ ಏರ್ಪಡಿಸಿದ್ದ ಕಪ್ಪತ್ತಗುಡ್ಡದ ಅರಿವು ಎಂಬ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ ಮಾತನಾಡಿ, ಅರಣ್ಯ ನಾಶ, ಅಕ್ರಮ ಗಣಿಗಾರಿಕೆ, ಅರಣ್ಯ ಒತ್ತುವರಿ ಮೊದಲಾದ ಪ್ರಕರಣಗಳಲ್ಲಿ ಅಧಿಕಾರಿಗಳು ಕೇವಲ ಜನ ಸಾಮಾನ್ಯರ ಮೇಲೆ ಕ್ರಮ ಕೈಗೊಳ್ಳದೆ ಎಲ್ಲರ ಮೇಲೆಯೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ವೈ.ಎನ್. ಗೌಡರ ಮಾತನಾಡಿದರು. ಸಾನ್ನಿಧ್ಯ ವಹಿಸಿದ್ದ ನಾಡೋಜ ಡಾ. ಅನ್ನದಾನೀಶ್ವರ ಶ್ರೀಗಳು ಮಾತನಾಡಿ, ಪೋಸ್ಕೋದಂತಹ ವಿದೇಶಿ ಕಂಪನಿಗಳನ್ನು ಈ ಭಾಗದಿಂದ ಹೊಡೆದೋಡಿಸುವ ಮೂಲಕ ಈ ಭಾಗದ ನೆಲ, ಜಲ ಹಾಗೂ ಅರಣ್ಯವನ್ನು ಸಕಾಲದಲ್ಲಿ ರಕ್ಷಿಸಲಾಗಿದೆ. ಅದರ ಜತೆಗೆ ಈ ಭಾಗದ ಕಪ್ಪತ್ತಗುಡ್ಡವನ್ನು ಇನ್ನೂ ಹಲವು ವಿಧದಲ್ಲಿ ಅಭಿವೃದ್ಧಿಪಡಿಸಬೇಕಿದೆ ಎಂದರು. ಆರ್.ಬಿ. ಡಂಬಳಮಠ ಅಧ್ಯಕ್ಷತೆ ವಹಿಸಿದ್ದರು. ನಂದಿವೇರಿ ಮಠದ ಶಿವಕುಮಾರ ಶ್ರೀಗಳು, ಡಿ.ಎನ್. ಅಘೋರೆ, ಪಿ.ವಿ. ದೊಡ್ಡಮನಿ, ಡಾ. ಎಂ.ಬಿ. ಬೆಳವಟಗಿಮಠ, ಡಾ. ವಿ.ಕೆ. ಕೋಳೂರಮಠ, ಡಾ. ಎಂ.ಬಿ. ಬೆಳವಟಗಿಮಠ, ಡಾ. ನಿಂಗು ಸೊಲಗಿ, ಶರಣಪ್ಪ ಕುಬಸದ, ದೇವಪ್ಪ ಇಟಗಿ, ಡಾ. ಬಿ.ಜೆ. ಜವಳಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

