ಗದಗ

ರಸ್ತೆ ದರೋಡೆಕೋರರಿಬ್ಬರ ಬಂಧನ: ರು. 18 ಲಕ್ಷದ ವಸ್ತು ವಶ

Published On :

ಗದಗ: ಕಳೆದ ಫೆ. 10ರಂದು ಬೆಳಗಿನ ಜಾವ ತಾಲೂಕಿನ ಲಕ್ಕುಂಡಿ ಗ್ರಾಮದ ಹೊರವಲಯದ ಹೆದ್ದಾರಿಯಲ್ಲಿ ಆಂಧ್ರಪ್ರದೇಶದಿಂದ ಸ್ಟೀಲ್ ರಾಡ್‌ಗಳನ್ನು ಹೇರಿಕೊಂಡು ಹುಬ್ಬಳ್ಳಿಯತ್ತ ಸಾಗುತ್ತಿದ್ದ ಲಾರಿಯೊಂದನ್ನು ತಡೆಗಟ್ಟಿ ಚಾಲಕ ಮತ್ತು ಕ್ಲೀನರ್‌ನಿಗೆ ಮಾರಕಾಸ್ತ್ರಗಳಿಂದ ಬೆದರಿಸಿ ಲಾರಿ ಸಮೇತ ಪರಾರಿಯಾಗಿದ್ದ ಇಬ್ಬರು ದರೋಡೆಕೋರರನ್ನು ಬಂಧಿಸುವಲ್ಲಿ ಜಿಲ್ಲಾ ವಿಶೇಷ ಪೊಲೀಸ್ ತಂಡ ಯಶಸ್ವಿಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಸ್.ಡಿ. ಶರಣಪ್ಪ ಹೇಳಿದರು.
ಅವರು ಮಂಗಳವಾರ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆಂಧ್ರಪ್ರದೇಶದ ಶಾದ್ ನಗರದಿಂದ 20 ಟನ್ ಸ್ಟೀಲ್‌ರಾಡ್ ಹೇರಿಕೊಂಡು ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿಯನ್ನು ಇಂಡಿಕಾರ್‌ನಲ್ಲಿ ಆಗಮಿಸಿದ ದರೋಡೆಕೋರರು ಲಕ್ಕುಂಡಿ ಹೊರವಲಯದಲ್ಲಿ ತಡೆದು ನಿಲ್ಲಿಸಿ, ಚಾಲಕ ಮತ್ತು ಕ್ಲೀನರ್‌ಗೆ ಮಾರಕಾಸ್ತ್ರಗಳನ್ನು ತೋರಿಸಿ ರು. 10 ಲಕ್ಷ ಮೌಲ್ಯದ ಲಾರಿ ಹಾಗೂ ರು. 8 ಲಕ್ಷ 44 ಸಾವಿರ ಮೌಲ್ಯದ ಸ್ಟೀಲ್‌ರಾಡ್ ಹಾಗೂ ಡ್ರೈವರ್ ಬಳಿಯಿದ್ದ ರು. 9700 ಮತ್ತು 2 ಮೊಬೈಲ್ ತೆಗೆದುಕೊಂಡು ಪರಾರಿಯಾಗಿದ್ದ ಘಟನೆ ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿತ್ತು. ಘಟನೆ ವರದಿಯಾಗುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾರ್ಗದರ್ಶನ ಹಾಗೂ ಉಪಪೊಲೀಸ್ ವರಿಷ್ಠಾಧಿಕಾರಿ ವಿಜಯ ಡಂಬಳ ನೇತೃತ್ವದಲ್ಲಿ ಪ್ರೋಬೇಷನರಿ ಡಿವೈಎಸ್‌ಪಿ ಬಿ.ಎಸ್. ನೇಮಗೌಡ ಹಾಗೂ ಗ್ರಾಮೀಣ ಸಿಪಿಐ ಎಂ. ಜಗದೀಶ ಸೇರಿದಂತೆ ಸಿಬ್ಬಂದಿ ತಂಡ ರಚಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸುಳಿವುಗಳು ಇರಲಿಲ್ಲ. ಆದರೆ, ವೈಜ್ಞಾನಿಕ ತಂತ್ರಜ್ಞಾನ ಬಳಕೆಯ ಮೂಲಕ ಮಾ. 4ರಂದು ಬೆಳಗ್ಗೆ ಹುಬ್ಬಳ್ಳಿಯಲ್ಲಿ ಆರೋಪಿ ಜಹಾಂಗೀರ ಸಯ್ಯದ್‌ಸಾಬ್ ಕೊಲ್ಹಾಪುರ ಹಾಗೂ ಸಚಿನ್ ರಮೇಶ ಪರದೇಶಿ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಇನ್ನು 3 ಜನರು ಈ ಪ್ರಕರಣದಲ್ಲಿ ಭಾಗಿಯಾಗಿರುವ ಮಾಹಿತಿ ದೊರೆತಿದ್ದು, ಶೀಘ್ರ ಬಂಧನಕ್ಕೆ ಜಾಲ ಬೀಸಲಾಗಿದೆ. ಕಳ್ಳತನವಾದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ಭೇದಿಸುವಲ್ಲಿ ಶ್ರಮಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪೊಲೀಸ್ ಇಲಾಖೆ ವತಿಯಿಂದ ಬಹುಮಾನ ಘೋಷಿಸಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.