ಗದಗ

ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿ ನಿಷೇಧಿಸಿ

Published On :

ಕನ್ನಡಪ್ರಭ ವಾರ್ತೆ, ಗದಗ, ಮಾ. 5
ಜಿಲ್ಲೆಯಲ್ಲಿ ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಈಚೆಗೆ       ಜಿಲ್ಲಾ ಗಣೇಶ ಮೂರ್ತಿ ತಯಾರಕರ ಸಂಘದ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ನೀರಿನಲ್ಲಿ ವಿಸರ್ಜಿಸುವುದರಿಂದ ಜಲಚರಗಳು ನಾಶವಾಗುತ್ತವೆ. ಪಾರಂಪರಿಕ ಕುಂಬಾರರು ನಿರುದ್ಯೋಗಿಗಳಾಗಿ ಮೂಲ ವೃತ್ತಿಯಿಂದ ವಿಮುಖರಾಗುವ ದುಸ್ಥಿತಿ ಬಂದಿದೆ. ಇನ್ನು 7 ತಿಂಗಳು ಮಾತ್ರ ಗಣೇಶ ಚತುರ್ಥಿ ಉಳಿದಿದೆ. ಈಗಾಗಲೇ ಗದಗ ನಗರದಲ್ಲಿ ಸಾಯಿಬಾಬಾ ಮಂದಿರದ ಹತ್ತಿರ ದಿನ ಒಂದಕ್ಕೆ ನೂರಾರು ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಗಣೇಶ ಮೂರ್ತಿಗಳ ತಯಾರಿಕೆ ಭರದಿಂದ ಸಾಗಿದೆ. ಈ ಸಂಬಂಧ ಈಗಾಗಲೇ ನಗರಸಭೆಗೆ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಇದನ್ನು ತಡೆಯಲು ವಿಫಲವಾಗಿದ್ದು ನೋವಿನ ಸಂಗತಿಯಾಗಿದೆ ಎಂದು ಮನವಿಯಲ್ಲಿ ತಿಳಿಸಿದೆ.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಮುತ್ತಣ್ಣ ಭರಡಿ ಮಾತನಾಡಿ, ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಕ್ಕೆ ಬಳಸುವ ಬಣ್ಣ ಮತ್ತಿತರ ವಸ್ತುಗಳು ವಿಷಪೂರಿತವಾಗಿರುತ್ತವೆ. ಈ ವಿಗ್ರಹಗಳನ್ನು ನೀರಿನಲ್ಲಿ ವಿಸರ್ಜನೆ ಮಾಡಿದ ನಂತರ ಭಾವಿ, ಕೆರೆಯಲ್ಲಿನ ನೀರು ಕೆಟ್ಟು ದೂರ್ವಾಸನೆ ಬರುತ್ತದೆ. ನೀರಿನ ಶುದ್ಧತೆ ಕಾಪಾಡುವ ಜಲಚರಗಳು ಸಹ ಸಾವನ್ನಪ್ಪುತ್ತಿವೆ. ಹಾಗಾಗಿ ಪ್ಲಾಸ್ಟರ್ ಆಫ್ ಪ್ಯಾರಿಸ್ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡದಂತೆ ನಿಷೇಧಿಸಬೇಕು ಎಂದು ಆಗ್ರಹಿಸಿದರು. ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಅಣ್ಣಿಗೇರಿ, ಬಾಬಣ್ಣ ನರಗುಂದ, ರಾಜು ಕುಂಬಾರ, ಪ್ರಕಾಶ ಕುಂಬಾರ, ರಾಜಪ್ಪ ಕುಂಬಾರ, ಮಂಜುನಾಥ ಕುಂಬಾರ, ಶರಣ್ಣಪ್ಪ ಅಕ್ಕಿ, ವಿನಾಯಕ ಜಂತ್ಲಿ, ಈರಣ್ಣ ಕಮ್ಮಾರ, ದೀಪಕ ಚಿತ್ರಗಾರ, ಬಸವರಾಜ ಚಕ್ರಸಾಲಿ, ಬಸವರಾಜ ಕುಂಬಾರ, ಹನುಮಂತಪ್ಪ ಜಿನಗಾರ, ಮುರಳಿ ಭಂಡಾರಿ, ಅಚ್ಚುತ ಬೆಂತೂರ, ಷಣ್ಮುಖ ಚಿತ್ರಗಾರ, ಶ್ರೀರಾಮ ಸೇನಾ ಜಿಲ್ಲಾ ಸಂಚಾಲಕ ರಾಜು ಖಾನಪ್ಪನವರ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.