ಗದಗ

ಸುದ್ದಿ ಸಂಕ್ಷೇಪ

Published On :

ಅಕ್ರಮ ಮರಳು ಸಾಗಾಟ: 8 ಲಾರಿ, ಟ್ರ್ಯಾಕ್ಟರ್ ವಶ
ಶಿರಹಟ್ಟಿ: ಶಿರಹಟ್ಟಿ-ಬೆಳ್ಳಿಟ್ಟಿ ಮಾರ್ಗ ಮಧ್ಯದಲ್ಲಿ ಮಂಗಳವಾರ ಬೆಳಗ್ಗೆ 5ರ ಸುಮಾರಿಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 8 ಲಾರಿ, 2 ಟ್ರ್ಯಾಕ್ಟರ್‌ಗಳನ್ನು ತಹಸೀಲ್ದಾರ್ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ವರವಿ ಗ್ರಾಮದ ಹತ್ತಿರ 2 ಲಾರಿ, ಸೂರಟೂರ ಬಳಿ 3 ಲಾರಿ, ಹಂಗನಕಟ್ಟಿ ಕಾಸ್ ಬಳಿ 3 ಲಾರಿ, ಶಿರಹಟ್ಟಿ ಪಟ್ಟಣದ ಸಮೀಪ 2 ಟ್ರ್ಯಾಕ್ಟರ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ರಾತ್ರಿ 2ರಿಂದ ಬೆಳಗ್ಗೆ 6ರವರೆಗೆ ಅಧಿಕಾರಿಗಳು 3 ಸ್ಥಳಗಳಲ್ಲಿ ದಾಳಿ ನಡೆಸಿದರು. ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎಲ್ಲ ವಾಹನಗಳಿಗೆ ಲಾರಿಗೆ ರು. 25 ಸಾವಿರ, ಟ್ರ್ಯಾಕ್ಟರ್‌ಗಳಿಗೆ ರು. 9 ಸಾವಿರ ದಂಡ ವಿಧಿಸಲಾಗಿದೆ ಎಂದು ತಹಸೀಲ್ದಾರ್ ಆರ್.ಬಿ. ನಿಂಗನಗೌಡ್ರ ತಿಳಿಸಿ, ತಾಲೂಕಿನ ತುಂಗಭದ್ರಾ ನದಿಯ ದಂಡದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಣಿಕೆಯನ್ನು ಸಂಪೂರ್ಣ ಬಂದ್ ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ಅರುಣ ಅಣ್ಣಿಗೇರಿ ನೇಮಕ
ಗದಗ:  ತಾಲೂಕಿನ ಅಡವಿಸೋಮಾಪುರ ಗ್ರಾಮದ ಬಿಜೆಪಿ ಯುವ ಮುಖಂಡ ಅರುಣ ಅಣ್ಣಿಗೇರಿ ಅವರನ್ನು ಜಿಲ್ಲಾ ಬಿಜೆಪಿ ಘಟಕದ ಹಿಂದುಳಿದ ವರ್ಗ ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಬಿಜೆಪಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.