ಗದಗ

ಹಿರೇಹಳ್ಳಕ್ಕೆ ಸೇತುವೆ ನಿರ್ಮಿಸಿ: ಆಗ್ರಹ

Published On :

ಗಜೇಂದ್ರಗಡ: ಮುಶಿಗೇರಿ ಗ್ರಾಪಂ ವ್ಯಾಪ್ತಿಯ ಗುಳಗುಳಿ ಗ್ರಾಮ ಸಂಪರ್ಕ ಕಲ್ಪಿಸುವ ಹಿರೇಹಳ್ಳಕ್ಕೆ ಸೇತುವೆ ನಿರ್ಮಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿ ಎಂದು ಗ್ರಾಮಸ್ಥರು ಶಾಸಕ ಜಿ.ಎಸ್. ಪಾಟೀಲರಿಗೆ ಆಗ್ರಹಿಸಿದರು.
ಶಾಸಕ ಜಿ.ಎಸ್. ಪಾಟೀಲ ಗುಳಗುಳಿ ಗ್ರಾಮಕ್ಕೆ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆಗೆ ಈಚೆಗೆ ಆಗಮಿಸಿದ ಸಂದರ್ಭದಲ್ಲಿ ಕಾಮಗಾರಿಗಳ ಪೂಜೆ ನೇರವೇರಿಸಿ ಮಾತನಾಡಿದರು.
ಗ್ರಾಮಸ್ಥರೊಂದಿಗೆ ಹಿರೇಹಳ್ಳದ ಸ್ಥಳಕ್ಕೆ ಭೇಟಿ ನೀಡಿದರು. ಗುಳಗುಳಿ, ಇಟಗಿ, ಚಿಕ್ಕಳಗುಂಡಗಿ, ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಹಿರೇಹಳ್ಳಕ್ಕೆ ಸೇತುವೆ ನಿರ್ಮಾಣ ಅತಿ ಅವಶ್ಯವಿದ್ದು, ಗ್ರಾಮ ಸುತ್ತಲೂ ಹಳ್ಳ ಇರುವುದರಿಂದ ಮಳೆಗಾಲದಲ್ಲಿ ನಡುಗಡ್ಡೆಯಾಗಿ ಮಾರ್ಪಟ್ಟಿರುತ್ತದೆ. ಗ್ರಾಮಕ್ಕೆ ಸಂಚರಿಸುವ ಏಕೈಕ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಇದರಿಂದ ಗ್ರಾಮಕ್ಕೆ ಸರಿಯಾಗಿ ಸಾರಿಗೆ ಸೌಲಭ್ಯ ಇಲ್ಲದಿರುವುದರಿಂದ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಅಳಲು ತೋಡಿಕೊಂಡರು.
ನಮ್ಮ ಗ್ರಾಮಕ್ಕೆ ಅಭಿವೃದ್ಧಿ ಕೆಲಸ ಬಿಡಿ ಮೊದಲು ಹಳ್ಳಕ್ಕೆ ಸೇತುವೆ ನಿರ್ಮಿಸಿಕೊಡಿ ಎಂದು ಶಾಸಕ ಜಿ.ಎಸ್. ಪಾಟೀಲರಲ್ಲಿ ಮನವಿ ಮಾಡಿದರು. ಹಿರೇಹಳ್ಳ ವೀಕ್ಷಣೆ ಮಾಡಿದ ಬಳಿಕ ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಶಾಸಕರು ಮಾತನಾಡಿ, ಹಿರೇಹಳ್ಳಕ್ಕೆ ಸೇತುವೆ ನಿರ್ಮಿಸುವ ಭರವಸೆ ನೀಡಿದ ಅವರು, ಈ ಭಾಗದ ಜನತೆಯ ಸಂಚಾರಕ್ಕೆ ತೀವ್ರ ತೊಂದರೆಯಾಗಿರುವ ಬೇವಿನಕಟ್ಟಿ, ದ್ಯಾಮುಣಸಿ ಗ್ರಾಮಗಳ ಬಳಿಯ ಸೇತುವೆಗಳ ನಿರ್ಮಾಣಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ಅದರಂತೆ ಗುಳಗುಳಿ ಗ್ರಾಮದ ಹಿರೇಹಳ್ಳಕ್ಕೆ ಮುಂಬರುವ ದಿನಗಳಲ್ಲಿ ಸೇತುವೆ ನಿರ್ಮಿಸಿ ಗ್ರಾಮಸ್ಥರ ತೊಂದರೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದರು. ಗ್ರಾಪಂ ಅಧ್ಯಕ್ಷೆ ಗೀತಾಬಾಯಿ ಕುಲಕರ್ಣಿ, ಉಪಾಧ್ಯಕ್ಷ ಚಂದಪ್ಪ ಗುಡದೂರ, ವಿ.ಆರ್. ಗುಡಿಸಾಗರ, ಅಶೋಕ ಬಾಗಮಾರ, ವೀರಣ್ಣ ಸೊನ್ನದ, ವೀರಣ್ಣ ಶೆಟ್ಟರ, ಪ್ರಭು ಮೇಟಿ, ಸದಸ್ಯ ಶ್ರೀಶೈಲಪ್ಪ ಹೆಗ್ಗಣ್ಣನವರ, ದೇವೇಂದ್ರಪ್ಪ ಹಾದಿಮನಿ, ಮೌನೇಶಪ್ಪ ಬಡಿಗೇರ, ಹೇಮಪ್ಪ ಮೂಗುರು, ಯಮನೂರಪ್ಪ ತಳವಾರ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.