ಯುವಪೀಳಿಗೆ ಜೀವನ ಕೌಶಲ್ಯ ಅಳವಡಿಸಿಕೊಳ್ಳಲಿ
ಕನ್ನಡಪ್ರಭ ವಾರ್ತೆ, ಗದಗ, ಮಾ. 5
ಯುವಪೀಳಿಗೆ ಶೈಕ್ಷಣಿಕ ಕಲಿಕೆಯೊಂದಿಗೆ ಜೀವನ ಕೌಶಲ್ಯ ಅಳವಡಿಸಿಕೊಳ್ಳುವ ಮೂಲಕ ಬದುಕಿನಲ್ಲಿ ಸಾರ್ಥಕತೆ ಕಂಡುಕೊಳ್ಳಬೇಕಿದೆ ಎಂದು ಧಾರವಾಡ ಸಿಡಾಕ್ನ ನಿರ್ದೇಶಕ ಡಾ. ವೀರಣ್ಣ ಎಸ್.ಎಚ್. ಹೇಳಿದರು.
ಅವರು ಬುಧವಾರ ಸ್ಥಳೀಯ ಕೆಎಲ್ಇ ಸಂಸ್ಥೆಯ ಜ. ತೋಂಟದಾರ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.
ವಿಶ್ವದಲ್ಲಿಯೇ ಭಾರತ ಅತ್ಯಂತ ಹೆಚ್ಚಿನ ಯುವಶಕ್ತಿ ಹೊಂದಿದ್ದು, ದೇಶದ ಆಗುಹೋಗುಗಳಲ್ಲಿ ಯುವಶಕ್ತಿಯ ಪ್ರಾಬಲ್ಯ ಪ್ರಬಲವಾಗಿದೆ. ಭಾರತ ತನ್ನಲ್ಲಿರುವ ಮಾನವ ಸಂಪನ್ಮೂಲಗಳನ್ನು ಬಳಸಿ ವಿಶ್ವದಲ್ಲಿ ತನ್ನ ಪ್ರಾಬಲ್ಯ, ಪಾಂಡಿತ್ಯ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದೆ. ಮಹಾವಿದ್ಯಾಲಯಗಳು ಕೇವಲ ಅಂಕಗಳಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವ್ಯವಸ್ಥೆಗೆ ಆದ್ಯತೆ ನೀಡದೇ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಮತ್ತು ಬದುಕಿನಲ್ಲಿ ಸಾರ್ಥಕತೆ ಹೊಂದುವ ನಿಟ್ಟಿನಲ್ಲಿ ಉದ್ಯೋಗ ಆಧಾರಿತ ಶಿಕ್ಷಣಕ್ಕೆ ಪ್ರಾಮುಖ್ಯ ನೀಡಬೇಕಿದೆ ಎಂದರು.
ಸಿಡಾಕ್ನ ಉಪನಿರ್ದೇಶಕ ಚಂದ್ರಶೇಖರ ಅಂಗಡಿ ಮಾತನಾಡಿ, ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ಉದ್ಯೋಗ ಮೇಳ ಯುವ ವಿದ್ಯಾರ್ಥಿಗಳಿಗೆ ಬದುಕು ಕಟ್ಟಿಕೊಳ್ಳಲು ಪ್ರೇರಣೆಯಾಗಿದ್ದು, ಸದಾವಕಾಶವನ್ನು ಸದ್ಬಳಕೆ ಮಾಡಿಕೊಳ್ಳಲು ವಿದ್ಯಾರ್ಥಿಗಳು ಆದ್ಯತೆ ನೀಡಬೇಕು ಎಂದರು.
ಲಾಜಿಕಲ್ ಕಂಪ್ಯೂಟರ್ ಸೆಂಟರ್ನ ವ್ಯವಸ್ಥಾಪಕ ನಿರ್ದೇಶಕ ಮಹೇಶ ಭಟ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಸಂವಹನ ಚಾಕಚಕ್ಕತೆ ಬೆಳೆಸಿಕೊಳ್ಳಬೇಕಿದೆ. ಉದ್ಯೋಗ ಮೇಳಗಳ ಕುರಿತು ಯಾವುದೇ ರೀತಿಯ ಭಯ ತೋರ್ಪಡಿಸದೇ ಆತ್ಮಸ್ಥೈರ್ಯದೊಂದಿಗೆ ಪಾಲ್ಗೊಳ್ಳಬೇಕು ಎಂದರು.
ಜೆಟಿ ಕಾಲೇಜಿನ ಸ್ಥಾನಿಕ ಸಮಿತಿ ಅಧ್ಯಕ್ಷ ವಿ.ಐ. ಕುರಗೋಡ ಅಧ್ಯಕ್ಷತೆ ವಹಿಸಿದ್ದರು. ಬಿಬಿಎ ಕಾಲೇಜಿನ ಪ್ರಾಚಾರ್ಯ ಎಂ.ಬಿ. ಚನ್ನಪ್ಪಗೌಡ್ರ, ಪಪೂ ಕಾಲೇಜಿನ ಪ್ರಾಚಾರ್ಯ ಎಂ.ಎಂ. ನರಗುಂದ ಮುಂತಾದವರು ಪಾಲ್ಗೊಂಡಿದ್ದರು. ಜೆಟಿ ಕಾಲೇಜಿನ ಪ್ರಾಚಾರ್ಯ ಎಸ್.ಎಸ್. ಯಂಕಂಚಿ ಸ್ವಾಗತಿದರು. ಸ್ಮಿತಾ ವಿ.ಕೆ. ನಿರೂಪಿಸಿದರು. ಪ್ರೊ. ಎಸ್.ಎಫ್. ಹಾಸಿಲ್ಕರ ವಂದಿಸಿದರು.
ಉದ್ಯೋಗ ಮೇಳದಲ್ಲಿ 3 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಉದ್ಯೋಗ ಆಕಾಂಕ್ಷಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ಕೆ ಟೆಕ್ ಮಹೀಂದ್ರಾ, ಟಾಟಾ ಮಾರ್ಕೋಪೋಲೊ, ಐಸಿಐಸಿಐ ಬ್ಯಾಂಕ್, ಸ್ಟುಪಾ ಕನ್ಸಲ್ಟನ್ಸಿ, ಒನಿಡಾ, ಸನ್ಸ್ಟಾರ್, ಪ್ರೋಮೋಸ್ ಇಂಡಿಯಾ, ಆದಿತ್ಯ ಬಿರ್ಲಾ, ಎಲ್ಐಸಿ, ವೈಟ್ಹಾರ್ಸ್, ಜಿನಿಯಸ್, ಸೋನಾಲಿಕಾ ಇಂಟರ್ನ್ಯಾಶನಲ್ ಸೇರಿದಂತೆ 22ಕ್ಕೂ ಅಧಿಕ ಕಂಪನಿಗಳು ಪಾಲ್ಗೊಂಡಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

