ಗದಗ

ಪರೀಕ್ಷೆ ಸಮಯದಲ್ಲಿ ವಿಷಯಗಳತ್ತ ಗಮನಹರಿಸಿ

Published On :

ಮುಂಡರಗಿ: ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳು ಪ್ರಾರಂಭವಾದಾಗಿನಿಂದಲೂ ಎಲ್ಲ ವಿಷಯಗಳ ಕುರಿತು ಅಭ್ಯಾಸ ಮಾಡುತ್ತ ಬರುವುದು ಸಾಮಾನ್ಯವಾಗಿ ನಡೆಯುತ್ತಲೇ ಇರುತ್ತದೆ. ಹಾಗಂತ ಪರೀಕ್ಷೆ ಸಮಯದಲ್ಲಿ ನಿರ್ಲಕ್ಷ್ಯ ಮಾಡದೇ ಪರೀಕ್ಷೆ ಸಮಯದಲ್ಲಿಯೇ ಮತ್ತೊಮ್ಮೆ ಎಲ್ಲ ವಿಷಯಗಳ ಕುರಿತು ಹೆಚ್ಚು ಗಮನಹರಿಸಬೇಕು ಎಂದು ಜ.ಅನ್ನದಾನ ಸಂಯುಕ್ತ ಪಪೂ ಕಾಲೇಜಿನ ಪ್ರಾ. ವಿ.ಎಫ್. ಅಂಗಡಿ ಹೇಳಿದರು.
ಅವರು ಈಚೆಗೆ ಪಟ್ಟಣದ ಜ. ಅನ್ನದಾನೀಶ್ವರ ಕಾಲೇಜಿನಲ್ಲಿ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ ಹಿಂದಿ ವಿಷಯದ 1 ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಹಿಂದಿ ಭಾಷೆಯು ನಮ್ಮ ರಾಷ್ಟ್ರೀಯ ಭಾಷೆಯಾಗಿದ್ದು, ಪ್ರತಿಯೊಬ್ಬರೂ ಅದನ್ನು ಓದಲು, ಬರೆಯಲು ಕಲಿಯುವುದು ಅವಶ್ಯವಾಗಿದೆ. ವಿದ್ಯಾರ್ಥಿಗಳು, ಹಿಂದಿ, ಗಣಿತ, ಇಂಗ್ಲಿಷ್‌ನಂತಹ ವಿಷಯಗಳ ಬಗ್ಗೆ ಗಮನಹರಿಸಿ ಎಂದರು.
ಕಳೆದ ವರ್ಷ ದ್ವಿತೀಯ ಪಿಯುಸಿಯಲ್ಲಿ ಹಿಂದಿ ವಿಷಯದಲ್ಲಿ 100ಕ್ಕೆ 90 ಅಂಕ ಪಡೆದಿರುವ ಸುಷ್ಮಾ ಅರಿಸಿನದ ಹಾಗೂ ಅನಿತಾರಾವ್ ಅವರಿಗೆ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು. ನಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಿಂದಿ ವಿಷಯದ ಕಾರ್ಯಾಗಾರ ಜರುಗಿತು. ಈ ಕಾರ್ಯಾಗಾರದಲ್ಲಿ ಭೀಮರಾವ್ ಕಟ್ಟಿಮನಿ ವಿದ್ಯಾರ್ಥಿಗಳಿಗೆ ಹಿಂದಿ ವಿಷಯದ ಕುರಿತು ತರಬೇತಿ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.