ಗದಗ

ವಿದ್ಯೆಯನ್ನು ಇಷ್ಟಪಟ್ಟು ಕಲಿಯಿರಿ: ಧಡೇಸೂರಮಠ

Published On :

ಗದಗ: ವಿದ್ಯೆಯನ್ನು ಕಷ್ಟಪಟ್ಟು ಕಲಿಯುವುದಕ್ಕಿಂತ ಇಷ್ಟಪಟ್ಟು ಕಲಿಯಬೇಕು. ಅಂದಾಗ ಕಲಿತ ವಿದ್ಯೆ ಸಾರ್ಥಕವಾಗುತ್ತದೆ ಎಂದು ಶಿಕ್ಷಕ ಎಂ.ಎಸ್. ಧಡೇಸೂರಮಠ ಹೇಳಿದರು.
ಇಲ್ಲಿನ ಪಟ್ಟಣದ ಚೈತನ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ಸಂಸ್ಥೆಯ ಆಶ್ರಮದಲ್ಲಿ ಈಚೆಗೆ ಹಮ್ಮಿಕೊಳ್ಳಲಾಗಿದ್ದ ಪಿಯುಸಿ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
ಉಪನ್ಯಾಸಕ ನಿಂಗರಾಜ ಬೇವಿನಕಟ್ಟಿ ಮಾತನಾಡಿ, ವಾಣಿಜ್ಯ ವಿಷಯ ಕಲಿಯುವುದು ಅಷ್ಟು ಕಷ್ಟದ ಕೆಲಸವೇನಲ್ಲ. ಒಮ್ಮೆ ಇದರಲ್ಲಿ ಮನಸ್ಸು ತೊಡಗಿಸಿಕೊಂಡರೆ ಸಾಧನೆಗೆ ಮಿತಿಯೆ ಇಲ್ಲ. ದೃಢ ಸಂಕಲ್ಪ, ಸತತ ಪ್ರಯತ್ನ, ಕೇಂದ್ರೀಕೃತವಾಗಿ ಅಧ್ಯಯನದಲ್ಲಿ ತೊಡಗಿಸಿಕೊಂಡಲ್ಲಿ ಪ್ರತಿ ವಿದ್ಯಾರ್ಥಿ ನೂರಕ್ಕೆ ನೂರು ಅಂಕ ಪಡೆಯುವುದರಲ್ಲಿ ಸಂಶಯವಿಲ್ಲ ಎಂದರು.
ನರೇಗಲ್ಲ ಠಾಣೆ ಎಎಸ್‌ಐ ಶಿಸ್ತಗಾರ, ರಘುನಾಥ ಕೊಂಡಿ, ಶಿಕ್ಷಕ ಅರುಣ ಕುಲಕರ್ಣಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಳೆದ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪಪಂ ಸದಸ್ಯ ಕಲ್ಮೇಶ ತೊಂಡಿಹಾಳ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ರಮೇಶ ಕಳಕೊಣ್ಣವರ, ತರಬೇತುದಾರ ಸಯ್ಯದ, ಶಿಕ್ಷಕ ನಾಗಠಾಣ, ಮಲ್ಲಕಂಬ ತರಬೇತುದಾರ ವಿ.ಬಿ. ಕುಂಬಾರ, ಕಳಕಪ್ಪ ಬೇವಿನಕಟ್ಟಿ, ವಿನಾಯಕ ಗ್ರಾಮಪುರೋಹಿತ, ಉಪನ್ಯಾಸಕ ಶಿವಾನಂದ ಗೋಗೇರಿ, ಈಶ್ವರ ಬೆಟಗೇರಿ ಮುಂತಾದವರು ಇದ್ದರು. ಸಂಸ್ಥೆಯ ಕಾರ್ಯದರ್ಶಿ ಎಂ.ಕೆ. ಬೇವಿನಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಮತಾ ಕುಲಕರ್ಣಿ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.