ಕಾಮಗಾರಿ ಗುಣಮಟ್ಟದ್ದಾಗಿರಲಿ
ಕನ್ನಡಪ್ರಭ ವಾರ್ತೆ, ರೋಣ, ಮಾ. 7
ರಸ್ತೆ, ಚರಂಡಿ, ಶೌಚಾಲಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವತ್ತ ಗಮನ ನೀಡಬೇಕು ಎಂದು ನರಗುಂದ ಶಾಸಕ ಬಿ.ಆರ್. ಯಾವಗಲ್ಲ ಹೇಳಿದರು.
ಇತ್ತೀಚೆಗೆ ನರಗುಂದ ಮತಕ್ಷೇತ್ರ ವ್ಯಾಪ್ತಿಯ ತಾಲೂಕಿನ ಮೇಗೂರ, ಮೇಲ್ಮಠ, ಸೋಮನಕಟ್ಟಿ, ಹುನಗುಂಡಿ, ಬೆನಹಾಳ, ಅಮರಗೋಳ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಲೋನಿ ಮೂಲಭೂತ ಸೌಕರ್ಯ ಯೋಜನೆಯಡಿಯಲ್ಲಿ ಮೇಗೂರು ಗ್ರಾಮದ ಎಸ್ಟಿ ಕಾಲೋನಿಯಲ್ಲಿ ರು. 10 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಹುನಗುಂಡಿ ಗ್ರಾಮದ ಎಸ್ಸಿ ಕಾಲೋನಿಯಲ್ಲಿ ರು. 10 ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ ಮತ್ತು ಎರಡು ಬದಿ ಚರಂಡಿ ನಿರ್ಮಾಣ, ಬೆನಹಾಳ ಗ್ರಾಮದ ಎಸ್ಸಿ ಕಾಲೋನಿಯಲ್ಲಿ ರು. 10 ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ ನಿರ್ಮಾಣ ಮತ್ತು ಅಮರಗೋಳ ಗ್ರಾಮದ ಎಸ್ಸಿ ಕಾಲೋನಿಯಲ್ಲಿ ರು. 10 ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ತಾಪಂ ಸದಸ್ಯ ಬಸನಗೌಡ ಶಿರಗುಂಪಿ ಮಾತನಾಡಿ, ನರಗುಂದ ಕ್ಷೇತ್ರವ್ಯಾಪ್ತಿಯ ತಾಲೂಕಿನ ಗ್ರಾಮಗಳ ಅಭಿವೃದ್ಧಿಗೆ ಶಾಸಕ ಬಿ.ಆರ್. ಯಾವಗಲ್ ಅವರು ಅನೇಕ ಮಹತ್ವಪೂರ್ಣ ಯೋಜನೆಗಳನ್ನು ತಯಾರಿಸಿದ್ದು, ಅವುಗಳನ್ನು ಹಂತ ಹಂತವಾಗಿ ಕಾರ್ಯಗತಗೊಳಿಸಲಿದ್ದಾರೆ ಎಂದರು. ಹುನಗುಂಡಿ ಗ್ರಾಪಂ ಉಪಾಧ್ಯಕ್ಷ ಬಸವಂತಪ್ಪ ತಳವಾರ, ಹೊಳೆಆಲೂರು ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಧಶರಥ ಗಾಣಿಗೇರ, ಮಲ್ಲಣ್ಣ ಮಮಟಗೇರಿ ಮಾತನಾಡಿದರು.
ಸಮಾಜ ಕಲ್ಯಾಣ ಅಧಿಕಾರಿ ಎಲ್.ವಿ. ಮೇಸ್ತಾ, ಪಿಡಬ್ಲ್ಯೂಡಿ ಎಇಇ ಎಂ.ಬಿ. ದಾನರಡ್ಡಿ, ಬಿ.ಆರ್. ಹಿರೇಗೌಡ್ರ, ಎಂ.ಡಿ. ತೋಗುಣಸಿ, ಎಸ್.ವಿ. ಪಾಟೀಲ, ಬಿ.ವಿ. ಹೊಸಗೌಡ್ರ, ಗ್ರಾಪಂ ಸದಸ್ಯ ಚನ್ನಪ್ಪ ವಾರದ, ಬಸನಗೌಡ ಪಾಟೀಲ, ಎಂ.ಪಿ. ಹಿರೇಮಠ, ಬಸವಂತಪ್ಪ ಅರಳಿ, ವಿಠಲ ಶಿಂದೆ, ಗುರಪ್ಪ ಬೆಳವಣಕಿ ಮುಂತಾದವರು ಉಪಸ್ಥಿತರಿದ್ದರು. ಶಿವರಾಜ ತಳವಾರ ಸ್ವಾಗತಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

