ಇಂದು ಶಾಲೆ ವಾರ್ಷಿಕೋತ್ಸವ
ರೋಣ: ಸ್ಥಳೀಯ ಸಿದ್ರಾಮೇಶ್ವರ ವಿದ್ಯಾವರ್ಧಕ ಸಂಸ್ಥೆಯ ಗ್ರೀನ್ವುಡ್ ಇಂಟರ್ನ್ಯಾಷನಲ್ ಪೂರ್ವ ಪ್ರಾಥಮಿಕ ಶಾಲೆ, ಸಿದ್ರಾಮೇಶ್ವರ ಪ್ರಾಥಮಿಕ ಶಾಲೆಯ 2ನೇ ವಾರ್ಷಿಕೋತ್ಸವ ಸಮಾರಂಭ ಮಾ. 8ರಂದು ಪಟ್ಟಣದ ಗ್ರೀನವುಡ್ ಇಂಟರನ್ಯಾಷನಲ್ ಶಾಲೆಯ ಆವರಣದಲ್ಲಿ ಜರುಗಲಿದೆ. ಬಾಲೇಹೊಸೂರ ದಿಂಗಾಲೇಶ್ವರ ವಿರಕ್ತಮಠದ ಕುಮಾರ ದಿಂಗಾಲೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಸ್ಥೆ ಚೇರ್ಮನ್ ಶೇಖರ ಸಾಲಮನಿ ಅಧ್ಯಕ್ಷತೆ ವಹಿಸುವರು. ವಿಪ ಸದಸ್ಯ ಬಸವರಾಜ ಹೊರಟ್ಟಿ, ಶಾಸಕ ಜಿ.ಎಸ್. ಪಾಟೀಲ, ಚಲನಚಿತ್ರ ನಿರ್ಮಾಪಕ ಅಣಜಿ ನಾಗರಾಜ, ಡಿಡಿಪಿಐ ರಾಜೇಂದ್ರ ಪ್ರಸಾದ, ಬಿಇಒ ಡಿ.ಐ. ಅಸುಂಡಿ, ಪುರಸಭೆ ಅಧ್ಯಕ್ಷ ಮುತ್ತಣ್ಣ ಸಂಗಳದ, ಗುತ್ತಿಗೆದಾರ ಸಿದ್ದು ಪಾಟೀಲ ಪ್ರೌಢಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ವಿ.ಎನ್.ಅಮಾತಿಗೌಡ್ರ ಇತರರು ಉಪಸ್ಥಿತರಿರುವರು. ಶಾಲೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಿಕ್ಷಣ ಸಂತ ಬಿ.ಜಿ. ಅಣ್ಣಿಗೇರಿ ಗುರುಗಳಿಗೆ ಸಂಸ್ಥೆಯಿಂದ ಪ್ರಶಸ್ತಿ ಪ್ರದಾನ ಜರುಗಲಿದೆ ಎಂದು ಶಾಲೆ ಅಧ್ಯಕ್ಷ ಅವಿನಾಶ ಸಾಲಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ವಾರ್ಷಿಕ ಸಮ್ಮೇಳನ
ರೋಣ: ಸ್ಥಳೀಯ ಪ್ರಜೆಂಟೇಶನ್ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪಾಲಕರ ಸಮಾವೇಶ ಕಾರ್ಯಕ್ರಮ ಮಾ. 8ರಂದು ಬೆಳಗ್ಗೆ 10ಕ್ಕೆ ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ಜರುಗಲಿದೆ. ಗುಲಗಂಜಿಮಠದ ಗುರುಪಾದ ಶ್ರೀಗಳು ಸಾನ್ನಿಧ್ಯ ವಹಿಸುವರು. ಜಿಪಂ ಮಾಜಿ ಅಧ್ಯಕ್ಷ ಎನ್.ಕೆ. ಬೇವಿನಮರದ ಅಧ್ಯಕ್ಷತೆ ವಹಿಸುವರು. ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಬಸವಂತಪ್ಪ ತಳವಾರ ಕಾರ್ಯಕ್ರಮ ಉದ್ಘಾಟಿಸುವರು. ಬಿಇಒ ಡಿ.ಐ. ಅಸುಂಡಿ, ಪಿಎಸ್ಐ ಡಿ.ಬಿ. ಪಾಟೀಲ, ಪುರಸಭೆ ಅಧ್ಯಕ್ಷ ಮುತ್ತಣ್ಣ ಸಂಗಳದ, ವಿಶ್ವನಾಥ ಜಿಡ್ಡಿಬಾಗಿಲ, ಮುತ್ತಣ್ಣ ಲಿಂಗನಗೌಡ್ರ, ಬಸವರಾಜ ಪಾಗದ, ಬಿ.ಎಸ್.ಬಸನಗೌಡ್ರ, ಮುದಕಪ್ಪ ಮುಗಲಿ, ರಾಜಣ್ಣ ಹುಲಿ ಇತರರಿರುವರು ಎಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ರವಿ ಗಂಜಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

