ಗದಗ

ಮುಳಗುಂದ ಪಪಂ ಉಪ ಚುನಾವಣೆ: ಕಾಂಗ್ರೆಸ್ಗೆ ಗೆಲವು

Published On :

ಮುಳಗುಂದ: ಸ್ಥಳೀಯ ಪಟ್ಟಣ ಪಂಚಾಯಿತಿಯ 9ನೇ ವಾರ್ಡ್ಗೆ ಮಾ. 2ರಂದು ನಡೆದ ಉಪ ಚುನಾವಣೆ ಫಲಿತಾಂಶ ಮಾ. 5ರಂದು ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಹುಸೇನಬಿ ಡಾಲಾಯತ್ 238 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ.
ಬಿಜೆಪಿಯ ವೀಣಾ ಭೋಳನವರ ಹಾಗೂ ಜೆಡಿಎಸ್ನ ಲಕ್ಷ್ಮವ್ವ ಕುಂದಗೋಳ ತಲಾ 129 ಮತಗಳನ್ನು ಸಮಾನಂತರವಾಗಿ ಪಡೆದು ಸೋಲು ಅನುಭವಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ಚಂದ್ರವ್ವ ಕುತ್ನಿ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಇವರ ಮರಣದ ಬಳಿಕ ನಡೆದ ಉಪಚುನಾವಣೆ ಇದಾಗಿದ್ದು, ಕಾಂಗ್ರೆಸ್ ಪಕ್ಷ ತನ್ನ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಫಲಿತಾಂಶ ಪ್ರಕಟವಾಗುತ್ತಿದಂತೆ ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರ ಮನೆಗೆ ತೆರಳಿ ವಿಜಯೋತ್ಸವ ಆಚರಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಸಿ.ಬಿ. ಬಡ್ನಿ, ಆರ್.ಎನ್.ದೇಶಪಾಂಡೆ, ಮಸ್ಸೂರ ಹಣಗಿ, ಬಿ.ವಿ. ಸುಂಕಾಪುರ, ಎಂ.ಎಸ್. ಕಣವಿ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.