ಮಾದರಿ ನೀತಿ ಸಂಹಿತೆ ಪಾಲನೆಗೆ ಸೂಚನೆ
ಶಿರಹಟ್ಟಿ: 16ನೇ ಲೋಕಸಭೆ ಚುನಾವಣೆಗೆ ತಾಲೂಕು ಆಡಳಿತ ಅಗತ್ಯ ಸಿದ್ಧತೆ ಕೈಗೊಂಡಿದೆ. ಮಾದರಿ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿವಿಧ ತಂಡ ರಚಿಸಲಾಗಿದೆ ಎಂದು ಸಹಾಯಕ ಚುನಾವಣಾ ಅಧಿಕಾರಿ(ಎಆರ್ಒ) ಟಿ.ದಿನೇಶ ತಿಳಿಸಿದರು.
ಶುಕ್ರವಾರ ಸಂಜೆ ತಹಸೀಲ್ದಾರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಾ. 5ರಂದೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅದರಂತೆ ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಾಗುವುದು. 5 ವಿಶೇಷ ತಂಡ ರಚನೆ ಮಾಡಲಾಗಿದ್ದು, 18 ಶೆಕ್ಟರ್ ಅಧಿಕಾರಿಗಳು ಸೇರಿದಂತೆ ಕಂಟ್ರೋಲ್ ರೂಂ. ಸಹಾಯವಾಣಿ ಸ್ಥಾಪಿಸಲು ಕ್ರಮ ಜರುಗಿಸಲಾಗಿದೆ. ಶಿರಹಟ್ಟಿ ಕ್ಷೇತ್ರ ವ್ಯಾಪ್ತಿಯಲ್ಲಿ 238 ಮತಗಟ್ಟೆ, 96,769 ಪುರುಷ, 90,750 ಮಹಿಳಾ ಮತದಾರರು ಸೇರಿ 1,87,519 ಮತದಾರರಿದ್ದಾರೆ. ಮಾ. 9ರಂದು ಹೊಸದಾಗಿ ಮತದಾರರ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಕುರಿತು ನಿಗದಿತ ಅರ್ಜಿಗಳನ್ನು ಸ್ವೀಕರಿಸುವ ವಿಶೇಷ ಆಂದೋಲನ ನಡೆಯುತ್ತಿದ್ದು, ಭೂತಮಟ್ಟದ ಅಧಿಕಾರಿಗಳನ್ನು ಭೇಟಿಯಾಗಿ ಮತದಾರ ಪಟ್ಟಿಯಲ್ಲಿ ಹೆಸರಿದೆಯೋ, ಇಲ್ಲವೋ ಎಂಬ ಕುರಿತು ಖಚಿತಪಡಿಸಿಕೊಳ್ಳಬೇಕು. ಮಾ. 16ರ ವರೆಗೆ ಮತಪಟ್ಟಿಯಲ್ಲಿ ಸೇರಿರದವರು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಮತಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ ಮತದಾರರ ಜಾಗೃತಿ, ಮಾಹಿತಿ ಕುರಿತು ವಿಶೇಷ ಕಾರ್ಯಕ್ರಮ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯನ್ವಯ ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ರಾಜಕೀಯ ವ್ಯಕ್ತಿಗಳ ಭಾವಚಿತ್ರವಿರುವ ಬಟ್ಟಿಂಗ್ಸ್, ಬ್ಯಾನರ್ಸ್ ಇತ್ಯಾದಿ ಪ್ರಚಾರ ಸಾಮಗ್ರಿಗಳನ್ನು ತಕ್ಷಣದಿಂದ ತೆರವುಗೊಳಿಸಲು ಸಂಬಂಧಪಟ್ಟ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

