ಗದಗ

ಪಕ್ಷದ ಸಂಘಟನೆಗಾಗಿ ದುಡಿಯೋಣ: ಮಹಾಂತಶೆಟ್ಟರ

Published On :

ಲಕ್ಷ್ಮೇಶ್ವರ: ಬಿಜೆಪಿಗೆ ಸೇರುವರ ಸಂಖ್ಯೆ ಇನ್ನು ಮುಂದೆ ಹೆಚ್ಚಾಗಲಿದ್ದು, ಪಕ್ಷಕ್ಕೆ ಸೇರುವವರಿಗೆ ಸದಾ ಸ್ವಾಗತ ನೀಡುತ್ತೇವೆ. ಪಕ್ಷದ ಕಾರ್ಯಕರ್ತರೊಂದಿಗೆ ಹೊಂದಿಕೊಂಡು ಪಕ್ಷವನ್ನು ಬಲಿಷ್ಠಗೊಳಿಸುವ ಕಾರ್ಯ ಮಾಡೋಣ ಎಂದು ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಹೇಳಿದರು.
ಶುಕ್ರವಾರ, ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ಅವರ ತೋಟದ ಮನೆಯಲ್ಲಿ ಶಿಗ್ಲಿ ಗ್ರಾಮದ ಗ್ರಾಪಂ ಮಾಜಿ ಅಧ್ಯಕ್ಷ ರಾಮಣ್ಣ ಲಮಾಣಿ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿ, ಅಧಿಕೃತವಾಗಿ ಬಿಜೆಪಿ ಸೇರಿದ ಸಂದರ್ಭದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಈಗ ಒಡೆದ ಮನೆಯಾಗಿದ್ದು ಬಹಳಷ್ಟು ನಾಯಕರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಬಿಟ್ಟು ಹೋಗಲಿದ್ದಾರೆ. ನರೇಂದ್ರ ಮೋದಿ ಹವಾ ರಾಜ್ಯದಲ್ಲಿ ಹಾಗೂ ದೇಶದಲ್ಲಿ ಬಲವಾಗಿ ಬೀಸುತ್ತಿದ್ದು, ಇದನ್ನು ಅರಿತ ಹಲವಾರು ನಾಯಕರು ಬಿಜೆಪಿ ಸೇರುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.
ಬಿಜೆಪಿ ಸೇರಿದ ಶಿಗ್ಲಿ ಗ್ರಾಪಂ ಮಾಜಿ ಅಧ್ಯಕ್ಷ ರಾಮಣ್ಣ ಲಮಾಣಿ ಮಾತನಾಡಿ, ದೇಶದ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿಗೆ ಸೇರಿದ್ದೇನೆ ಎಂದರು. ವೈದ್ಯ ಡಾ. ವೈ.ಎಫ್. ಹಂಜಿ ಮಾತನಾಡಿದರು. ಚಂಬಣ್ಣ ಬಾಳಿಕಾಯಿ, ಬಿಜೆಪಿ ತಾಲೂಕು ಅಧ್ಯಕ್ಷ ನಾಗರಾಜ ಕುಲಕರ್ಣಿ, ಶಿಗ್ಲಿ ಗ್ರಾಪಂ ಅಧ್ಯಕ್ಷ ಡಿ.ವೈ. ಹುನಗುಂದ, ಗ್ರಾಪಂ ಉಪಾಧ್ಯಕ್ಷ ಮನೋಹರ ಕರ್ಜಗಿ, ಸದಸ್ಯ ಕೃಷ್ಣಾ ಬಿದರಳ್ಳಿ, ರಮೇಶ ಹಣಗಿ, ಪಟ್ಟಣದ ಎಪಿಎಂಸಿ ಅಧ್ಯಕ್ಷ ಕುಬೇರಪ್ಪ ಮಹಾಂತಶೆಟ್ಟರ, ತಾಪಂ ಮಾಜಿ ಅಧ್ಯಕ್ಷ ಮದನ್ಲಾಲ್ ಭಾಪಣಾ, ಅಶೋಕ ಪಲ್ಲೇದ, ಬಸವರಾಜ ಪಲ್ಲೇದ, ಶಿವಣ್ಣ ಮಹಾಂತಶೆಟ್ಟರ, ಶಿಗ್ಲಿಯ ವಿಎಸ್ಎಸ್ ಬ್ಯಾಂಕ್ ಅಧ್ಯಕ್ಷ ಸಿದ್ದಣ್ಣ ಯಲಿಗಾರ, ಈಶ್ವರ ಲಮಾಣಿ, ಶಿವಣ್ಣ ಲಮಾಣಿ, ಪುಂಡಲೀಕ ಲಮಾಣಿ, ಬಸವರಾಜ ತೋಟದ, ಟೋಪಣ್ಣ ಲಮಾಣಿ, ತಾವರೆಪ್ಪ ಲಮಾಣಿ, ನೀಲಪ್ಪ ಗೋಣೆಪ್ಪನವರ, ಪ್ರಕಾಶ ರಜಪೂತ, ಗುರಪ್ಪ ಒಡ್ಡರ, ರಾಮಣ್ಣ ಕಲಕೋಟಿ, ರವಿ, ಹರವಿ, ಮಂಜು ಬೆಂಡಿಗೇರಿ, ಗಣೇಶ ಲಮಾಣಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.