ಮಕ್ಕಳ ಕಲಿಕೆಯಲ್ಲಿ ಪಾಲಕರ, ಶಿಕ್ಷಕರ ಪಾತ್ರ ಪ್ರಮುಖ
ಕನ್ನಡಪ್ರಭ ವಾರ್ತೆ, ಮುಂಡರಗಿ, ಮಾ. 9
ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಿ ತಮ್ಮ ಜವಾಬ್ದಾರಿ ಮುಗಿಯಿತು ಎಂದು ಸುಮ್ಮನೆ ಕುಳಿತುಕೊಳ್ಳದೆ ಅವರ ವಿದ್ಯಾಭ್ಯಾಸ, ದೈನಂದಿನ ಚಟುವಟಿಕೆ, ಮನೆಗೆಲಸ ಮೊದಲಾದವುಗಳ ಕುರಿತು ತೀವ್ರ ನಿಗಾವಹಿಸಬೇಕು. ಪ್ರಾಥಮಿಕ ಹಂತದ ಮಕ್ಕಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಪಾಲಕರ ಪಾತ್ರವೂ ಪ್ರಮುಖವಾಗಿದೆ ಎಂದು ಭಾಗ್ಯಲಕ್ಷ್ಮಿ ಬಿಳಿಮಗ್ಗದ ಹೇಳಿದರು.
ಅವರು ಈಚೆಗೆ ಪಟ್ಟಣದ ಎಸ್.ಎಂ. ಭೂಮರಡ್ಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ 7ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಪಾಲಕರ ದಿನಾಚರಣೆಯಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಕರು ಹೇಳುವ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿಯೂ ತೊಡಗಿಕೊಳ್ಳುವುದು ಅವಶ್ಯ. ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ ತಮ್ಮಲ್ಲಿರುವ ಸೂಕ್ತ ಪ್ರತಿಭೆ ಪ್ರದರ್ಶಿಸಲು ಅವಕಾಶ ದೊರೆಯುತ್ತದೆ. ಸರ್ಕಾರ ಇಂದು ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಎಲ್ಲ ರೀತಿಯ ಸೌಲಭ್ಯ ಒದಗಿಸುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಪಾಲಕರು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಊರ್ಮಿಳಾದೇವಿ ಭೂಮರಡ್ಡಿ ಸಮಾರಂಭ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂಸಿ ಅಧ್ಯಕ್ಷ ಚಂದ್ರಕಾಂತ ಚಿಕ್ಕಣ್ಣವರ, ವೀಣಾ ಪಾಟೀಲ, ಬಿ.ಎಚ್. ಸೂಡಿ, ಎಚ್.ಜಿ. ಗಡ್ಡಗೌಡರ, ಎ.ಕೆ. ಮುಲ್ಲಾನವರ, ಈರಣ್ಣ ಮಡಿವಾಳರ ಮಾತನಾಡಿದರು. ನೂರಜಾನ ತಾಂಬೋಟಿ, ದೇವರಾಜ ಹಡಪದ, ಹನುಮಂತ ಮಡಿವಾಳರ, ಲಕ್ಷ್ಮವ್ವ ಕುರಿ, ರೇಣುಕಾ ಈಳಿಗೇರ, ಸುರೇಶ ಹುಬ್ಬಳ್ಳಿ, ನಿಂಗಪ್ಪ ಹರ್ಲಾಪುರ, ಎ.ಸಿ. ಕೆಳಗಿನಮನಿ, ಎಂ.ಬಿ. ಕನ್ಯಾಳ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಎನ್.ಎಂ. ಕನ್ಯಾಳ ಸ್ವಾಗತಿಸಿದರು. ಶಿಕ್ಷಕಿ ಸುಜಾತಾ ಹರ್ತಿ ನಿರೂಪಿಸಿದರು. ಶಿಕ್ಷಕ ವಿ.ಜಿ. ಡೊಳ್ಳಿನ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

