ಮಹಿಳಾ ದೌರ್ಜನ್ಯ ತಡೆ ಕಾಯ್ದೆ ಸಮರ್ಪಕ ಜಾರಿ
ಕನ್ನಡಪ್ರಭ ವಾರ್ತೆ, ಗದಗ, ಮಾ. 10
ಸರ್ಕಾರಗಳು ಮಹಿಳಾ ದೌರ್ಜನ್ಯ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದರೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕಾನೂನು ಸಲಹೆಗಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸದಸ್ಯೆ ಎಸ್.ವಿ. ಕಬಾಡಿ ಹೇಳಿದರು.
ಅವರು ನಗರದ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿಯ ಕಾರ್ಯಾಲಯದಲ್ಲಿ ಶನಿವಾರ ಸ್ಲಂ ಮಹಿಳಾ ಸಮಿತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮಹಿಳಾ ದಿನಾಚಾರಣೆ ನಿಮಿತ್ತ ಶೋಷಿತ ಮಹಿಳೆಯರ ದಿನ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿ ಮಾತನಾಡಿದರು. ದೇಶದಲ್ಲಿ ಪ್ರತಿನಿತ್ಯ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಭ್ರೂಣ ಹತ್ಯೆ, ಬಾಲ ವಿವಾಹ, ಮುಂತಾದ ಶೋಷಣೆಗಳು ನಡೆಯುತ್ತವೆ. ನಮ್ಮ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಲು ಸಾಧ್ಯ ವಾಗುತ್ತಿಲ್ಲ. ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ, ವರದಕ್ಷಿಣೆ ಕಿರುಕುಳ, ಬಾಲ ವಿವಾಹದಂತಹ ಘೋರ ಅಪರಾಧ ಇದಕ್ಕೆ ಕಠಿಣ ಶಿಕ್ಷೆಯಾಗಬಹುದೆಂದು ಗೊತ್ತಿದ್ದರೂ ನಮ್ಮ ದೇಶದಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲಿವೆ. ಕಾನೂನಿನ ಅರಿವು ಇದ್ದರೂ ಮಹಿಳೆಯರ ಮೇಲೆ ಶೋಷಣೆಗಳು ನಿಂತಿಲ್ಲ. ಸರ್ಕಾರಗಳು ಇಂತಹ ಪ್ರಕರಣಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡು ಮಹಿಳೆಯರಿಗೆ ರಕ್ಷಣೆ ನೀಡಬೇಕಾಗಿದೆ. ಮಹಿಳೆಯರು ತಮ್ಮ ಮೇಲೆ ಆಗುತ್ತಿರುವ ಶೋಷಣೆಗಳನ್ನು ವಿರೋಧಿಸಿ ಮಹಿಳಾ ಸಮಿತಿಗಳ ಮೂಲಕ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ಸಲಹೆಗಳನ್ನು ಪಡೆದು ಅಪರಾಧಿಗಳಿಗೆ ಶಿಕ್ಷೆ ಆಗುವಂತೆ ಧೈರ್ಯದಿಂದ ಕಾನೂನು ಸಹಾಯ ಪಡೆಯಲು ಮುಂದಾಗಬೇಕು ಎಂದರು.
ಜಿಲ್ಲಾ ಕೊಳಚೆ ಸಮಿತಿ ಅಧ್ಯಕ್ಷ ಅಶೋಕ ಮ್ಯಾಗೇರಿ ಕಾರ್ಯಕ್ರಮ ಉದ್ಘಾಟಿಸಿದರು. ಸ್ಲಂ ಮಹಿಳಾ ಸಮಿತಿ ಅಧ್ಯಕ್ಷ ಉಮಾದೇವಿ ಕಾತರಕಿ ಅಧ್ಯಕ್ಷತೆ ವಹಿಸಿದ್ದರು. ಸ್ಲಂ ಸಮಿತಿ ಉಪಾಧ್ಯಕ್ಷ ಅಶೋಕ ಕುಡತಿನ್ನಿ, ಪ್ರಧಾನ ಕಾರ್ಯದರ್ಶಿ ಇಮ್ತಿಯಾಜ ಮಾನ್ವಿ, ಯುವ ಸಮಿತಿ ಅಧ್ಯಕ್ಷ ಶರೀಫ್ ಬಿಳೆಯಲಿ, ಉಪಾಧ್ಯಕ್ಷ ಯಲ್ಲಪ್ಪ ರಾಮಗಿರಿ, ಕಮಲವ್ವ ಬಿದರೂರು, ಮಮ್ತಾಜಬೇಗಂ ಮಕಾಂದಾರ, ರೇಣುಕಾ ಆಡಿನ, ಗೌರಮ್ಮ ಶಿರಗುಪ್ಪಿ, ದೇವಕ್ಕ ತಳವಾರ, ಸೂಫಿಯಾ ಹರ್ಸಾಪುರ ಇದ್ದರು. ಪರವೀನಬಾನು ಬಡಿಗೇರಿ ಸ್ವಾಗತಿಸಿದರು. ತಿಪ್ಪವ್ವ ಮುಟಗಾರ ನಿರೂಪಿಸಿದರು. ಆರತಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

