ಗದಗ

ಕಾಂಗ್ರೆಸ್‌ಗೆ 20ಕ್ಕೂ ಹೆಚ್ಚು ಸ್ಥಾನ: ಎಚ್ಕೆ

Published On :

ಗದಗ: ಪ್ರಧಾನ ಮಂತ್ರಿ ಡಾ. ಮನಮೋಹನ್‌ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿರುವ ಹಲವಾರು ಜನಪರ ಯೋಜನೆಗಳ ಆಧಾರದಲ್ಲಿ ನಾವು ಚುನಾವಣೆ ಎದುರಿಸುತ್ತಿದ್ದು. ರಾಜ್ಯದಲ್ಲಿ 20ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಸೋಮವಾರ ನಗರಸಭಾ ಭವನದಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಂತರ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರ ಭದ್ರತೆ, ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ, ಶಿಕ್ಷಣಕ್ಕೆ ವಿಶೇಷ ಒತ್ತು ಹೀಗೆ ಹತ್ತಾರು ಜನಪರ ಯೋಜನೆಗಳನ್ನು ಕೇಂದ್ರ ಸರ್ಕಾರ ನೀಡಿದ್ದರೆ, ರಾಜ್ಯ ಸರ್ಕಾರವೂ ಹತ್ತಾರ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ, ರಾಜ್ಯದ ಪ್ರತಿಯೊಬ್ಬರ ಬದುಕಿನಲ್ಲಿ ಆಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಯತ್ನಿಸಿದೆ. ಇದೆಲ್ಲಾ ನಮಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶ್ರೀರಕ್ಷೆಯಾಗಲಿದ್ದು, ಅಭಿವೃದ್ಧಿ ಆಧಾರದಲ್ಲಿಯೇ ನಮಗೆ ಜನತೆ ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಷ್ಟ್ರದ ಪ್ರತಿ ಪ್ರಜೆಗೂ ಹಕ್ಕುಗಳನ್ನು ದೊರೆಕಿಸುವಲ್ಲಿ ರಚನಾತ್ಮಕ ಕಾರ್ಯ ಕೈಗೊಂಡ ಕಾಂಗ್ರೆಸ್ ಪಕ್ಷ ಮಾನವನ ಬದುಕಿನಲ್ಲಿ ಗುಣಾತ್ಮಕ ಬದಲಾವಣೆ ತರಲು ಪ್ರಾಮಾಣಿಕ ಪ್ರಯತ್ನ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಉತ್ತಮ ಜನಪರ ಆಡಳಿತ ನೀಡುವ ಮೂಲಕ ಜನಮಾನಸಕ್ಕೆ ಹತ್ತಿರವಾಗಿದೆ. ಈ ಹಿನ್ನೆಲೆಯಲ್ಲಿ ಮತದಾರ ಕಾಂಗ್ರೆಸ್ ಪಕ್ಷದ ಪರ ಲೋಕಸಭಾ ಚುನಾವಣೆಯಲ್ಲಿ ತನ್ನ ಮತಚಲಾಯಿಸುವ ಮೂಲಕ ಕೇಂದ್ರದಲ್ಲಿ ಮತ್ತೆ ಪಕ್ಷ ಅಧಿಕಾರ ಹಿಡಿಯಲಿದೆ ಎಂದರು.
ಗದಗ-ಬೆಟಗೇರಿ ಅವಳಿ ನಗರದ ಪ್ರಥಮ ಪ್ರಜೆಯ ಆಯ್ಕೆ ಅವಿರೋಧವಾಗಿ ಆಯ್ಕೆ ಮಾಡಿರುವ ಕ್ರಮ ಉತ್ತಮ ಬೆಳವಣಿಗೆಯಾಗಿದೆ. ಅವಿರೋಧ ಆಯ್ಕೆಗೆ ಸಹಕಾರ ನೀಡಿದ ವಿರೋಧ ಪಕ್ಷದ ನಾಯಕರು ಹಾಗೂ ಸದಸ್ಯರನ್ನು ಅಭಿನಂದಿಸುವುದಾಗಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.