ಪಾಠ ಕಲಿಯುವ ಅಗತ್ಯ ನನಗಿಲ್ಲ: ಯಾವಗಲ್ಲ
ನರಗುಂದ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾನು 4 ಬಾರಿ ಶಾಸಕನಾಗಿ ಸೇವೆ ಸಲ್ಲಿಸಿದ್ದೇನೆ. ಇದರ ಬಗ್ಗೆ ನನಗೆ ಮಾಜಿ ಸಚಿವ ಸಿ.ಸಿ. ಪಾಟೀಲ ಪದೇ ಪದೇ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಸ್ಪದ ಎಂದು ಶಾಸಕ ಬಿ.ಆರ್. ಯಾವಗಲ್ ಹೇಳಿದರು. ಅವರು ಶನಿವಾರ ಪಟ್ಟಣದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪುರಸಭೆ ವಿಷಯಕ್ಕೆ ಸಂಬಂಧಪಟ್ಟಂತೆ ಅವರ ಪಕ್ಷದ ಅಭ್ಯರ್ಥಿ ಸ್ವ ಇಚ್ಛೆಯಿಂದ ನಮ್ಮ ಪಕ್ಷಕ್ಕೆ ಬಂದಿದ್ದಕ್ಕೆ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯ ಪದ್ಧತಿಯಂತೆ ಸ್ವಾಗತಿಸಿದ್ದೇವೆ. ಆದರೆ, ಮಾಜಿ ಸಚಿವ ಸಿ.ಸಿ. ಪಾಟೀಲರು ಪುರಸಭೆ ಅಧಿಕಾರಕ್ಕೆ ಜೋತು ಬಿದ್ದು ನಮ್ಮ ಪಕ್ಷದ ಅಭ್ಯರ್ಥಿಯನ್ನು ಆಸೆ ಆಮಿಷವೊಡ್ಡಿ ಅವರನ್ನು ಸೆಳೆದುಕೊಂಡು ಪುರಸಭೆ ಅಧಿಕಾರದ ಗದ್ದುಗೆ ಏರಿದ್ದು, ಇದು ಪ್ರಜಾಪ್ರಭುತ್ವ ವಿರೋಧಿ ತನ ಅಲ್ಲವೇ? ಹಿಂದಿನ ಅವಧಿಯಲ್ಲಿ ನಮ್ಮ ಪಕ್ಷದ ಇಬ್ಬರು ಪುರಸಭೆ ಸದಸ್ಯರಿಗೆ ಆಸೆ ಆಮಿಷ ತೋರಿಸಿ ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡಿ ಇವರು ಅಧಿಕಾರ ಮಾಡಿಲ್ಲವೇ? ಎಂದರು. ಚಂಬಣ್ಣ ವಾಳದ, ರಾಜು ಕಲಾಲ, ಗುರುಪಾದಪ್ಪ ಕುರಹಟ್ಟಿ, ದ್ಯಾಮಣ್ಣ ಸವದತ್ತಿ, ಪುಂಡಲಿಕಪ್ಪ ಹುಲಜೋಗಿ, ವಿಠ್ಠಲ ಶಿಂದೆ, ಎಫ್.ವೈ. ದೊಡಮನಿ, ಎಂ.ಎಂ. ಮುಳ್ಳೂರ, ಎಸ್.ಡಿ. ದುಷಿ, ಕೆ.ಬಿ. ಖಲೀಪ್, ಗೋವಿಂದರಡ್ಡಿ ತಿಮ್ಮರಡ್ಡಿ, ಚಂದ್ರು ಮೊರಬದ, ಗುರು ದೊಡ್ಡಮನಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

