ಗದಗ

ಮಹಿಳೆಯರು ಮುಖ್ಯವಾಹಿನಿಗೆ ಬನ್ನಿ

Published On :

ಗಜೇಂದ್ರಗಡ: ಸಮಾಜದಲ್ಲಿ ಮಹಿಳಾ ಸಮುದಾಯದ ಪಾತ್ರ ಅಗಾಧವಾದದ್ದು, ಈ ನಿಟ್ಟಿನಲ್ಲಿ ಮಹಿಳೆಯರು ಶಿಕ್ಷಣ ಪಡೆಯುವ ಜತೆಗೆ ಆರ್ಥಿಕವಾಗಿ ಸಬಲರಾಗಿ ಸಮಾಜದ ಮುಖ್ಯವಾಹಿನಿಗೆ ಬನ್ನಿ ಎಂದು 108 ತುರ್ತು ಚಿಕಿತ್ಸಾ ತಜ್ಞ ಮಂಜುನಾಥ ನಾವಿ ಹೇಳಿದರು.
ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ 108 ಆರೋಗ್ಯ ಕವಚ ಸಿಬ್ಬಂದಿ ವತಿಯಿಂದ ಈಚೆಗೆ ಜರುಗಿದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರಿಗೆ ಸನ್ಮಾನಿಸಿ ಮಾತನಾಡಿದರು. ಸಮಾಜದಲ್ಲಿ ಮಹಿಳೆಗೆ ಒಂದಿಲ್ಲೊಂದು ಕಾರಣದಿಂದಾಗಿ ಶೋಷಣೆ ನಡೆಯುತ್ತಿರುವುದು ಶೋಚನಿಯ. ಇದು ನಿಲ್ಲಬೇಕು. ಜತೆಗೆ ಮಹಿಳಾ ಸಮುದಾಯಕ್ಕೆ ಕಾಡುತ್ತಿರುವ ಅಭದ್ರತೆ ಕೊನೆಗೊಂಡಾಗ ಮಾತ್ರ ಮಹಿಳೆ ಸ್ವಾವಲಂಬನೆಯ ಬದುಕು ಸಾಗಿಸಲು ಸಾಧ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ 108 ಜಿಲ್ಲಾ ಮೇಲ್ವಿಚಾರಕ ಶ್ರೀನಿವಾಸ ಕುಲಕರ್ಣಿ ಮಾತನಾಡಿ, ಸರ್ಕಾರ ಮಹಿಳಾ ಸಬಲಿಕರಣಕ್ಕಾಗಿ ಹಲವಾರು ಯೋಜನೆ ರೂಪಿಸಿ ಜಾರಿಗೊಳಿಸಿದೆ. ಯೋಜನೆ ಲಾಭ ಪಡೆದು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಹಾಗೂ ಸಂಘಟನಾತ್ಮಕವಾಗಿ ಹೊರಹೊಮ್ಮಿ ಎಂದರು. ಭಾಗ್ಯಶ್ರೀ ಹಡಪದ, ಎಸ್.ಬಿ. ಪಾಟೀಲ, ಅಂಜನಾ ಅಗಸಿಮನಿ, ಮಾಬುಬಿ, ಮಹಮ್ಮದನೂರ, ನಾಗರತ್ನ ಬೇವಿನಮರದ, ರಾಮಣ್ಣ ಬುರನಟ್ಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.