ವಿದ್ಯಾರ್ಥಿಗಳು ಉತ್ತಮ ಗುಣ ಬೆಳೆಸಿಕೊಳ್ಳಿ
ನರಗುಂದ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಒಳ್ಳೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು. ಇದರಿಂದ ಮುಂದಿನ ಸಮಾಜ ಸುಧಾರಣೆಯಾಗಲು ಸಾಧ್ಯ ಎಂದು ಸಂಗಳದ ಶಿವಾನಂದ ಮಠದ ರಾಚೋಟೇಶ್ವರ ಶ್ರೀಗಳು ಹೇಳಿದರು.
ಅವರು ಈಚೆಗೆ ತಾಲೂಕಿನ ಶಿರೋಳ ಗ್ರಾಮದ ಬಿ.ಎಂ. ಪಾಟೀಲ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. ದೇಶಕ್ಕೆ ಉತ್ತಮ ಗುಣಗಳ ಹೊಂದಿರುವ ಮಕ್ಕಳ ಅವಶ್ಯಕತೆಯಿದ್ದು, ಹಾಗಾಗಿ ಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಒಳ್ಳೆಯ ಗುಣ ಬೆಳೆಸಿಕೊಂಡಲ್ಲಿ ಸಮಾಜ ಸುಧಾರಣೆ ಮಾಡಲು ಸಾಧ್ಯ. ವಿದ್ಯಾರ್ಥಿಗಳು ಅಂಕದ ಕಡೆ ಹೆಚ್ಚು ಗಮನ ಹರಿಸುವುದರೊಂದಿಗೆ ಧಾರ್ಮಿಕ ಜ್ಞಾನ ಬೆಳೆಸಿಕೊಳ್ಳಿ ಇದರಿಂದ ನಿಮ್ಮ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ ಎಂದರು.
ಡಾ. ಹನುಮಂತ ಹಾಲವಳ್ಳಿ ಮಾತನಾಡಿ, ವಿದ್ಯಾರ್ಥಿಗಳು ಹಿಂದೆ ಗುರು ಮುಂದೆ ಗುರಿಯನ್ನು ಇಟ್ಟುಕೊಂಡು ಉತ್ತಮ ಮಾರ್ಗದಲ್ಲಿ ನಡೆದು ತಮ್ಮ ಜೀವನವನ್ನು ಸಾರ್ಥಕ ಪಡೆಸಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳಾದ ಡಾ. ಮಲ್ಲಿಕಾರ್ಜುನ ಶಾಲದಾರ, ಮಲ್ಲಿಕಾರ್ಜುನ ಹಿರೇಮಠ ಅವರನ್ನು ಸನ್ಮಾನಸಲಾಯಿತು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಂಸ್ಥೆಯ ಅಧ್ಯಕ್ಷ ಬಿ.ವಿ. ಪಾಟೀಲ, ಜಿಪಂ ಸದಸ್ಯೆ ಶಾರದಾ ಹಿರೇಗೌಡ್ರ, ಪ್ರಕಾಶಗೌಡ ತಿರಕನಗೌಡ್ರ, ಸಿದ್ದಯ್ಯ ಹೊಸಮನಿ, ಶೇಖರಯ್ಯ ನಾಗಲೋಟಮಠ, ಬಿ.ವಿ. ಕಾಡದೇವರಮಠ, ಈಶ್ವರಗೌಡ ತೀರಕನಗೌಡ್ರ, ಸಾಳಿಗೌಡ ಸಾಲಿಗೌಡ್ರ, ದ್ಯಾಮಣ್ಣ ಕಾಡಪ್ಪನವರ, ದ್ಯಾವಣಗೌಡ ಪಾಟೀಲ, ಶಂಕ್ರಪ್ಪ ಜಂಗವಾಡ, ಶೇಖರಗೌಡ ನವಲಗುಂದ, ಮುಖ್ಯೋಪಾಧ್ಯಾಯ ಎಸ್.ಪಿ. ಬೀಡಿಕರ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

