ಕಾಲ್ಪನಿಕ ವೇತನ ಸುತ್ತೋಲೆ ಹಿಂಪಡೆಯಿರಿ
ಗದಗ: ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಕಾಲ್ಪನಿಕ ವೇತನದ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ರು. 280 ಕೋಟಿ ಆರ್ಥಿಕ ಹೊರೆಗೆ ಒಳಪಟ್ಟು ವಿಪನ ಅಧಿವೇಶನದಲ್ಲಿ ಮಸೂದೆಯನ್ನು ಅಂಗೀಕಾರ ಮಾಡಿಕೊಂಡು ಈಗ ಉನ್ನತ ಶಿಕ್ಷಣ ಇಲಾಖೆಯ ನಿರ್ದೇಶಕರು ಮಾ. 4ರಂದು ಹೊರಡಿಸಿದ ನೌಕರರಿಗೆ ಮಾರಕವಾದ ಸುತ್ತೋಲೆಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ರಾಜ್ಯ ಪಪೂ ಮಹಾವಿದ್ಯಾಲಯಗಳ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಸಂಘದ ಕಾರ್ಯಾಧ್ಯಕ್ಷ ಪ್ರಾ. ಎಂ.ಸಿ. ಕಟ್ಟಿಮನಿ ಮಾತನಾಡಿ, ಸರ್ಕಾರ ಸದನದಲ್ಲಿ ನೀಡಿದ ಮಾತಿನಂತೆ ನಡೆದುಕೊಳ್ಳದೆ ನೌಕರರಿಗೆ ಗಾಯದ ಮೇಲೆ ಬರೆ ಎಳೆಯುವ ರೀತಿಯಲ್ಲಿ ಇಲಾಖೆಯ ಸುತ್ತೋಲೆ ಹೊರಡಿಸುವ ಕ್ರಮ ಖಂಡನಾರ್ಹ. ಒಂದು ವೇಳೆ ಸುತ್ತೋಲೆ ಹಿಂಪಡೆಯದಿದ್ದರೆ ಎಲ್ಲ ಸಂಘಟನೆಯವರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದರು.
ಸಂಘಟನೆಯ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಜಿ.ಎಂ. ಹಕಾರಿ, ಜಿಲ್ಲಾ ಘಟಕದ ಪದಾಧಿಕಾರಿಗಳಾದ ಪ್ರಾ. ಆರ್.ಎಸ್. ಪಾಟೀಲ, ಎಸ್.ಎನ್. ಹೊಟ್ಟಿನ, ಎಸ್.ಎಫ್. ಮುದ್ದನಗೌಡ್ರ, ಹಳೆಮನಿ, ವಿ.ಎಚ್. ಚನ್ನಶೆಟ್ಟಿ, ಆರ್.ಸಿ. ಬಿರಾದಾರ, ಎ.ಎ. ವೈದ್ಯ, ಬಿ.ಜಿ. ಯಳವತ್ತಿ, ವೈ.ಬಿ. ಹೆಬ್ಬಾಳ, ಬಿ.ವಿ. ಪಾಟೀಲ, ಆರ್.ಎಸ್. ಚವಡಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

