ಗದಗ

ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ

Published On :

ಗಜೇಂದ್ರಗಡ: ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಸಂಸ್ಕಾರದ ಪಠ್ಯದ ಜತೆಗೆ ಸ್ಪರ್ಧಾತ್ಮಕ ವಿಷಯಾಧಾರಿತ ಶಿಕ್ಷಣ ನೀಡಿದಾಗ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಲು ಸಾಧ್ಯ ಎಂದು ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ ಪ್ರಾಚಾರ್ಯ ಎಸ್.ಟಿ. ಭೈರಪ್ಪನವರ ಹೇಳಿದರು.
ಅವರು ಸ್ಥಳೀಯ ಓಂ ಶ್ರೀ ಸಾಯಿ ಏಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನ ಕಿಡ್ಸ್ ಕ್ಯಾಂಪಸ್ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭವನ್ನು ಈಚೆಗೆ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ಮಕ್ಕಳಿಗೆ ಆಟದೊಂದಿಗೆ ಪಾಠ ಕಲಿಸುವ ಪ್ರವೃತ್ತಿ ಮೈಗೂಡಿಸಿಕೊಂಡು ಬೋಧಿಸಿದಾಗ ತಮಗೂ ಶಿಕ್ಷಣದ ಮಹತ್ವ ತಿಳಿಯುವುದರ ಜತೆಗೆ ಸರಳ ಬೋಧನೆಗೆ ಸಹಕಾರಿಯಾಗಲಿದೆ. ಪಾಲಕರು ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ತಮ್ಮ ನಿತ್ಯ ಬದುಕಿನ ಕೆಲ ಸಮಯ ಮೀಸಲಿಡುವುದು ಅವಶ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಆನಂದ ಮಂತ್ರಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ಗಿರೀಶ ವೇರ್ಣೇಕರ, ವಿ.ಜಿ. ಕೂಡ್ಲಿಗಿಮಠ, ಎಂ.ವಿ. ಕೂಡ್ಲಿಗಿಮಠ, ಮೋಹನ ಕನಕೇರಿ, ಮುಖ್ಯಗುರುಮಾತೆ ಸುಪ್ರೀಯಾ, ನಾಗ್ಮಿನ ಮುಜಾವರ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ಸೆಳೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.