ವಿದ್ಯಾರ್ಥಿಗಳು ಮೌಲ್ಯ ಅಳವಡಿಸಿಕೊಳ್ಳಲಿ
ಕನ್ನಡಪ್ರಭ ವಾರ್ತೆ, ನರೇಗಲ್ಲ, ಮಾ. 11
ವಿದ್ಯಾರ್ಥಿಗಳು ಜೀವನದಲ್ಲಿ ಮೌಲ್ಯ ಅಳವಡಿಸಿಕೊಳ್ಳಬೇಕು. ಇದರಿಂದ ಬದುಕು ಸುಂದರವಾಗುತ್ತದೆ. ಮೌಲ್ಯಗಳನ್ನು ಕಲಿಯಲು ಮಹಾತ್ಮರ ಜೀವನ ಚರಿತ್ರೆಗಳನ್ನು ಓದುವುದನ್ನು ರೂಢಿಸಿಕೊಳ್ಳಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅವರು ಈಚೆಗೆ ಸ್ಥಳೀಯ ಕೋಡಿಕೊಪ್ಪದಲ್ಲಿರುವ ಪಿಎಸ್‌ಎಸ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಇಂದಿನ ದಿನಗಳಲ್ಲಿ ಸಮಾಜದಲ್ಲಿ ಮೌಲ್ಯಗಳೇ ಕಾಣೆಯಾಗುತ್ತಿವೆ. ಇವುಗಳನ್ನು ಮತ್ತೆ ಮರು ಸ್ಥಾಪಿಸುವಲ್ಲಿ ನಾವೆಲ್ಲರೂ ಶ್ರಮಿಸಬೇಕಿದೆ ಎಂದರು.
ಹಿರಿಯ ನ್ಯಾಯವಾದಿ ಆರ್.ವಿ. ಗುಡಿಸಾಗರ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಿದರು. ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಡಾ. ಕೆ.ಬಿ. ಧನ್ನೂರ ಅಧ್ಯಕ್ಷತೆ ವಹಿಸಿದ್ದರು. ಹುಚ್ಚೀರೇಶ್ವರ ಕ್ರೀಡಾ ಸಂಸ್ಥೆಯ ವಿದ್ಯಾರ್ಥಿಗಳಿಂದ ನಡೆದ ಮಲ್ಲಕಂಬ ಪ್ರದರ್ಶನ ಜರುಗಿತು. ಕಾರ್ಯದರ್ಶಿ ಬಿ.ಎಫ್. ಚೇಗರಡ್ಡಿ ಸ್ವಾಗತಿಸಿದರು. ಮುಖ್ಯೋಪಾಧ್ಯಾಯಿನಿ ಇಂದಿರಾ ನಾಯಕ ವರದಿ ವಾಚನ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

