ಗದಗ

ರೋಣ: ಶಾಂತಿಯುತ ದ್ವಿತೀಯ ಪಿಯುಸಿ ಪರೀಕ್ಷೆ

Published On :

ರೋಣ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ತಾಲೂಕಿನ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಶಾಂತಿಯುತವಾಗಿ ನಡೆಯಿತು.
ಮೊದಲ ದಿನದ ರಾಜ್ಯಶಾಸ್ತ್ರ ಪರೀಕ್ಷೆಗೆ 1765ರಲ್ಲಿ 1635 ವಿದ್ಯಾರ್ಥಿಗಳು ಹಾಜರಿದ್ದು, 130 ವಿದ್ಯಾರ್ಥಿಗಳು ಗೈರಾಗಿದ್ದರು. ರೋಣ ಹಾಗೂ ಗಜೇಂದ್ರಗಡ ಪಟ್ಟಣದಲ್ಲಿ ತಲಾ 2 ಪರೀಕ್ಷಾ ಕೇಂದ್ರಗಳು ಸೇರಿದಂತೆ ತಾಲೂಕಿನ ನರೇಗಲ್ಲ, ಹೊಳೆಆಲೂರು ಸೇರಿದಂತೆ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿತು.
ಇದರಲ್ಲಿ ಪಟ್ಟಣದ ಸರ್ಕಾರಿ ಪಪೂ ಕಾಲೇಜ್ ಕೇಂದ್ರದಲ್ಲಿ 238 ವಿದ್ಯಾರ್ಥಿಗಳು ಹಾಜರಿದ್ದು, ಐವರು ಗೈರಾಗಿದ್ದರು. ಪಟ್ಟಣದ ವೀರರಾಣಿ ಚನ್ನಮ್ಮ ಪಪೂ ಕಾಲೇಜಿನ ಕೇಂದ್ರದಲ್ಲಿ 232 ವಿದ್ಯಾರ್ಥಿಗಳು ಹಾಜರಿದ್ದು, 11 ವಿದ್ಯಾರ್ಥಿಗಳು ಗೈರಾಗಿದ್ದರು. ಹೊಳೆಆಲೂರಿನ ಕಲ್ಮೇಶ್ವರ ಪಪೂ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ 249 ವಿದ್ಯಾರ್ಥಿಗಳು ಹಾಜರಿದ್ದು, 17 ವಿದ್ಯಾರ್ಥಿಗಳು ಗೈರಾಗಿದ್ದರು. ನರೇಗಲ್ಲ್ ಎಸ್‌ಎ ಪಪೂ ಕಾಲೇಜಿನ ಕೇಂದ್ರದಲ್ಲಿ 233 ಹಾಜರಿದ್ದು, 47 ವಿದ್ಯಾರ್ಥಿಗಳು ಗೈರಾಗಿದ್ದರು. ಗಜೇಂದ್ರಗಡದ ಎಸ್.ಎಂ. ಭೂಮರಡ್ಡಿ ಪಪೂ ಕಾಲೇಜನ ಪರೀಕ್ಷಾ ಕೇಂದ್ರದಲ್ಲಿ 259 ವಿದ್ಯಾರ್ಥಿಗಳು ಹಾಜರಿದ್ದು, 23 ವಿದ್ಯಾರ್ಥಿಗಳು ಗೈರಾಗಿದ್ದರು. ಸರ್ಕಾರಿ ಪಪೂ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ 424 ವಿದ್ಯಾರ್ಥಿಗಳು ಹಾಜರಾಗಿದ್ದು, 27 ವಿದ್ಯಾರ್ಥಿಗಳು ಗೈರಾಗಿದ್ದಾರೆ. ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1635 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ತಾಲೂಕಿನ ವಿವಿಧ ಕೇಂದ್ರಗಳಲ್ಲಿ ಜರುಗಿದ ಪಿಯುಸಿ ಪರೀಕ್ಷೆಗಳು ಶಾಂತಿಯುತವಾಗಿ ಜರುಗಿದವು ಎಂದು ಪಪೂ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ನಿರ್ದೇಶಕ ಬಿ.ಎಸ್. ಗೌಡರ ಕನ್ನಡಪ್ರಭಕ್ಕೆ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.