ಶಾಂತಿ, ಸುವ್ಯವಸ್ಥೆಗಾಗಿ 61 ಜನರ ಬಂಧನಕ್ಕೆ ಕ್ರಮ: ಕೆ.ಟಿ. ಬಾಲಕೃಷ್ಣ
ಗದಗ: ಬರುವ ಲೋಕಸಭಾ ಚುನಾವಣೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಸಂಬಂಧವಾಗಿ ಗೂಂಡಾಕಾಯ್ದೆಯಡಿ 3 ಜನರನ್ನು ಹಾಗೂ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ 58 ಜನರನ್ನು ಬಂಧಿಸಲು ಕ್ರಮ ಜರುಗಿಸಲಾಗುತ್ತಿದೆ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಟಿ. ಬಾಲಕೃಷ್ಣ ಹೇಳಿದರು.
ಅವರು ಬುಧವಾರ ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಬಿಗಿಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ.
ಚುನಾವಣೆಯಲ್ಲಿ ಅಕ್ರಮ ಸಾರಾಯಿ, ಹಣ ಸಾಗಾಟ, ವಸ್ತುಗಳ ಸಾಗಾಟ ತಡೆಯುವ ಸಂಬಂಧವಾಗಿ ಜಿಲ್ಲಾದ್ಯಂತ 21 ಚೆಕ್‌ಪೋಸ್ಟ್ ತೆರೆಯಲು ನಿರ್ಧರಿಸಲಾಗಿದ್ದು, ಎರಡು ದಿನಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗುವುದು. ಜಿಲ್ಲೆಯೂ ಎರಡು ಲೋಕಸಭಾ ವ್ಯಾಪ್ತಿಗೆ ಬರುವುದರಿಂದ ಎರಡು ಲೋಕಸಭೆಗೆ 910 ಮತಗಟ್ಟೆ ತೆರೆಯಲಾಗಿದ್ದು, ಎಲ್ಲ ಮತಗಟ್ಟೆಗೂ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು.
ರಾಜಕೀಯವಾಗಿ ಹಾಗೂ ಗ್ರಾಮಗಳಲ್ಲಿ ಚುನಾವಣೆಯ ವಿಷಯವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಮತಗಟ್ಟೆಗಳ ಸಂಖ್ಯೆ ಕಡಿಮೆ ಇದ್ದವು. ಲೋಕಸಭೆಗೆ ಮತಗಟ್ಟೆಗಳ ಸಂಖ್ಯೆ ಹೆಚ್ಚಾಗಿವೆ. ಹೀಗಾಗಿ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗುತ್ತಿದ್ದು, ಇವುಗಳನ್ನು ಸಹಿತ ಇನ್ನೆರಡು ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಡಿಎಸ್‌ಪಿ ವಿಜಯ ಡಂಬಳ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

