ಇಂದು ಶಾಖೆ ಉದ್ಘಾಟನೆ
ನರಗುಂದ: ಪಟ್ಟಣದ ಆಶ್ರಯ ಯೋಜನೆ ಬಡಾವಣೆಯಲ್ಲಿ ಮಾ. 14ರಂದು ಬೆಳಗ್ಗೆ 11ಕ್ಕೆ ಕರ್ನಾಟಕ ಸಮತಾ ಸೈನಿಕ ದಳ ಕೆಎಸ್ಎಸ್ಡಿ ಗದಗ ಜಿಲ್ಲಾ ಇದರ ನರಗುಂದ ತಾಲೂಕು ಶಾಖೆಯ ಉದ್ಘಾಟನೆ ಜರಗಲಿದ್ದು, ಈ ಸಮಾರಂಭಕ್ಕೆ ಪತ್ರಿವನ ಮಠದ ಸಿದ್ದವೀರ ಶ್ರೀಗಳು, ಕರ್ನಾಟಕ ಸಮತಾ ಸೈನಿಕ ದಳ ರಾಜ್ಯಾಧ್ಯಕ್ಷ ಬಿ. ಚನ್ನಕೃಷ್ಣಪ್ಪ, ಮಹಿಳಾ ರಾಜ್ಯಾಧ್ಯಕ್ಷೆ ಕಮಲಮ್ಮನವರ, ಜಾಕೀರ ಹುಸೇನ ಸೇರಿದಂತೆ ಧಾರವಾಡ ಜಿಲ್ಲೆಯ ಮುಖಂಡರು ಹಾಗೂ 14 ಗ್ರಾಮ ಶಾಖೆಯ ಪದಾಧಿಕಾರಿಗಳು ಭಾಗವಹಿಸವರು ಎಂದು ಪ್ರಕಟಣೆ ತಿಳಿಸಿದೆ.
ನಾಳೆ ವಿಕಲಚೇತನರಿಗೆ ಚಿಕಿತ್ಸೆ
ಗದಗ: ರೆಡ್ಕ್ರಾಸ್ ಭವನದಲ್ಲಿ ಬುದ್ಧಿಮಾಂದ್ಯ ಮತ್ತು ಸೆಲೆರ್ಬಲ್ ಪಾಲಸಿಯಿಂದ ಬಳಲುತ್ತಿರುವ ರೋಗಿಗಳಿಗೆ ಹಾಗೂ ದೈಹಿಕವಾಗಿ ಬಳಲುತ್ತಿರುವ ವಿಕಲಚೇತನರಿಗೆ ಉಚಿತ ಚಿಕಿತ್ಸೆ ಮತ್ತು ಮಾತಿನ ಚಿಕಿತ್ಸೆಯನ್ನು ಮಾ. 15ರಂದು ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊ: 8762333830 ಇಲ್ಲಿಗೆ ಸಂಪರ್ಕಿಸುವಂತೆ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ವರದಾ ಕೋಲಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೀವಶಾಸ್ತ್ರ ಪರೀಕ್ಷೆ: ಓರ್ವ ಡಿಬಾರ್
ಗದಗ: ಗುರುವಾರ ಜರುಗಿದ ದ್ವಿತೀಯ ಪಿಯುಸಿ ಜೀವಶಾಸ್ತ್ರ ಪರೀಕ್ಷೆಯಲ್ಲಿ ಹೊಳೆಆಲೂರಿನ ಎಸ್.ಕೆ. ಪದವಿಪೂರ್ವ ಕಾಲೇಜಿನಲ್ಲಿ ಓರ್ವ ವಿದ್ಯಾರ್ಥಿ ಡಿಬಾರ್ ಆಗಿದ್ದಾನೆ. ಜೀವಶಾಸ್ತ್ರ ವಿಷಯದಲ್ಲಿ ಒಟ್ಟು 2051 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, 1984 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 67 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪಪೂ ಶಿಕ್ಷಣ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಎಸ್. ಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿಂಚಣಿ: ಮೊಬೈಲ್ ಸಂಖ್ಯೆ ನಮೂದಿಸಿ
ಗದಗ: ಸರ್ಕಾರಿ ಸೇವೆಯಿಂದ ಅಧಿಕಾರಿ ಹಾಗೂ ಸಿಬ್ಬಂದಿಗಳ ಪಿಂಚಣಿ ಪ್ರಸ್ತಾವನೆಯನ್ನು ಮಹಾಲೇಖ ಪಾಲಕರಿಗೆ ಸಲ್ಲಿಸುವಾಗ ಪಿಂಚಣಿದಾರರ ಮೊಬೈಲ್ ನಂಬರನ್ನು ನಮೂದಿಸಿ ಕಳಿಸಲು ಸಣ್ಣ ಉಳಿತಾಯ ಮತ್ತು ಪಿಂಚಣಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

