ಗದಗ

ಸುಳ್ಳು ಪ್ರಚಾರ ಮಾಡಿ ಗೆದ್ದವರಿಗೆ ಈ ಸಲ ತಕ್ಕಪಾಠ: ಸಿ.ಸಿ. ಪಾಟೀಲ್

Published On :

ಕನ್ನಡಪ್ರಭ ವಾರ್ತೆ, ನರಗುಂದ, ಮಾ. 14
ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ನನ್ನ ಅನಾರೋಗ್ಯದ ಬಗ್ಗೆ ಕ್ಷೇತ್ರದ ಜನತಗೆ ತಪ್ಪು ತಿಳಿವಳಿಕೆ ನೀಡಿ ಆಯ್ಕೆಯಾದವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ    ಹೇಳಿದರು.
ಅವರು ಶುಕ್ರವಾರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ನವರು ನನ್ನ ಅನಾರೋಗ್ಯವನ್ನೇ ನೆಪ ಮಾಡಿಕೊಂಡು ಕ್ಷೇತ್ರದ ಜನತೆಗೆ ಸಿ.ಸಿ. ಪಾಟೀಲ ಬದಕುವುದಿಲ್ಲವೆಂದು ತಪ್ಪು ತಿಳಿವಳಿಕೆ ನೀಡಿದ್ದರಿಂದ ಜನತೆ ಸಹಜವಾಗಿ ಗೊಂದಲದಲ್ಲಿದ್ದರು. ಈಗ ದೇವರ ಮತ್ತು ಕ್ಷೇತ್ರದ ಜನತೆಯ ಆಶೀರ್ವಾದ ಅವರ ಹಾರೈಕೆಯಿಂದ ಬದುಕಿ ಬಂದಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಸಿ.ಸಿ. ಪಾಟೀಲರ ಪ್ರಭಾವ ಗೊತ್ತಾಗುತ್ತದೆ ಎಂದು ಪರೋಕ್ಷವಾಗಿ ಶಾಸಕರಿಗೆ ಟಾಂಗ್ ನೀಡಿದರು. ಈ ಬಾರಿ ದೇಶದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗುವುದು ಶತಸಿದ್ಧ ನಮ್ಮ ಅಭ್ಯರ್ಥಿ ಪಿ.ಸಿ. ಗದ್ದೌಗಡರನ್ನು ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗುವುದು ಖಚಿತ ಹಾಗೂ ನರಗುಂದ ಕ್ಷೇತ್ರದಿಂದ 15 ರಿಂದ 20 ಸಾವಿರ ಮತಗಳು ಬಿಜೆಪಿಗೆ ಹೆಚ್ಚುವರಿಯಾಗಿ (ಲೀಡ್) ಸಿಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಧೋಳ ಶಾಸಕ ಗೋವಿಂದ ಕಾರಜೋಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.