ಅರ್ಥ ವ್ಯವಸ್ಥೆ ಚೆನ್ನಾಗಿದ್ದರೆ ದೇಶ ಸುಭದ್ರ
ಕನ್ನಡಪ್ರಭ ವಾರ್ತೆ, ಮುಂಡರಗಿ, ಮಾ. 14
ದೇಶದ ಅಭಿವೃದ್ಧಿ ಆ ದೇಶದ ಅರ್ಥ ವ್ಯವಸ್ಥೆಯ ಮೇಲೆ ಅವಲಂಬಿಸಿರುತ್ತದೆ. ದೇಶದ ಅರ್ಥ ವ್ಯವಸ್ಥೆ ಚೆನ್ನಾಗಿದ್ದರೆ ದೇಶ ಸುಭದ್ರ ಮತ್ತು ಸುವ್ಯವಸ್ಥಿತವಾಗಿರುತ್ತದೆ ಎಂದು ಜ. ನಾಡೋಜ ಡಾ. ಅನ್ನದಾನೀಶ್ವರ ಶ್ರೀಗಳು ಹೇಳಿದರು.
ಅವರು ಸ್ಥಳೀಯ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆ ನೂತನ ಕಟ್ಟಡ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬ್ಯಾಂಕ್ಗಳು ಚೆನ್ನಾಗಿ ಕೆಲಸ ಮಾಡುತ್ತಿರುವುದರಿಂದ ಸರ್ಕಾರದ ಅನೇಕ ಯೋಜನೆಗಳು ಯಶಸ್ವಿಯಾಗುತ್ತಿವೆ. ಬದ್ಧತೆಯ ಮೂಲಕ ಕರ್ತವ್ಯವನ್ನು ನಿರ್ವಹಿಸುವುದು ಇಂದಿನ ದಿನಗಳಲ್ಲಿ ಅವಶ್ಯವಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆ ಮುಂಡರಗಿಯಲ್ಲಿ ಪ್ರಾರಂಭಗೊಂಡ ಎರಡೇ ವರ್ಷದಲ್ಲಿ ಗ್ರಾಹಕರ ಮೆಚ್ಚಿಗೆಗೆ ಪಾತ್ರವಾಗಿದೆ ಎಂದರು.
ತಾಪಂ ಇಒ ಡಿ.ಮೋಹನ್ ಮಾತನಾಡಿ, ಒಂದು ಪ್ರದೇಶ ಅಭಿವೃದ್ಧಿ ಹೊಂದಬೇಕಾದರೆ ಬ್ಯಾಂಕ್ಗಳ ಪಾತ್ರ ಪ್ರಮುಖವಾಗಿದೆ. ಸರ್ಕಾರದ ಅನೇಕ ಯೋಜನೆಗಳನ್ನು ಸಾಕಾರಗೊಳಿಸುವಲ್ಲಿ ಈ ಬ್ಯಾಂಕ್ ಸಾಕಷ್ಟು ಶ್ರಮವಹಿಸುತ್ತಿದೆ ಎಂದರು.
ಡಾ. ಎಂ.ಬಿ. ಬೆಳವಟಗಿಮಠ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ವ್ಯವಸ್ಥಾಪಕ ಪ್ರಬಂಧಕ ಆರ್.ಕೆ. ಬಸವರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಕರಬಸಪ್ಪ ಹಂಚಿನಾಳ, ಡಾ. ವೈ.ಎಸ್. ಮೇಟಿ, ಎ.ಎಂ. ಮೇಟಿ, ನಾರಾಯಣಪ್ಪ ಇಲ್ಲೂರ, ಜಿ.ಎಂ. ಕುಲಕರ್ಣಿ, ಚಂದ್ರಕಾಂತ ಮಟ್ಟಿ, ಬಸವರಾಜ ಮುದ್ದಿ ಮತ್ತು ಬ್ಯಾಂಕ್ ಸಿಬ್ಬಂದಿ, ಸಾರ್ವಜನಿಕರು ಪಾಲ್ಗೊಂಡಿದ್ದರು. ಬಸವರಾಜ ರಾಮೇನಹಳ್ಳಿ ನಿರೂಪಿಸಿದರು. ಸತ್ಯೇಂದ್ರ ಸಿಂಗ್ ವಂದಿಸಿದರು.
--
ಮತದಾನ ನಿಮ್ಮ ಹಕ್ಕು, ನಿಮ್ಮ ಮತ ಚಲಾಯಿಸಿ
ಗದಗ: ಪ್ರತಿ ಪ್ರಜೆಯು ಮತದಾರನಾಗಿ ನೋಂದಣಿ ಮಾಡಲು ಹಾಗೂ ಎಲ್ಲ ನೋಂದಾಯಿತ ಮತದಾರರು ಚುನಾವಣೆಯಲ್ಲಿ ಮತದಾನ ಮಾಡಲು ಅನುಕೂಲವಾಗುವಂತೆ ಭಾರತ ಚುನಾವಣಾ ಆಯೋಗವು ಮತದಾರರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಗದಗ ಜಿಲ್ಲಾ ಸಾರ್ವತ್ರಿಕ ಚುನಾವಣೆ ವೀಕ್ಷಕರುಗಳ ನೋಡೆಲ್ ಅಧಿಕಾರಿ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್.ಐ. ಕುಂಬಾರ ಹೇಳಿದರು.
ಅವರು ಶುಕ್ರವಾರ ಸ್ಥಳೀಯ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಸದಸ್ಯರಿಗೆ ಸ್ಪೀಪ್ ಸಮಿತಿಯ ಚುನಾವಣೆಯ ಜಾಗೃತಿ ಚಟುವಟಿಕೆ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಮಾತನಾಡಿದರು. ಸ್ವೀಪ್ ಕುರಿತು ತಿಳಿವಳಿಕೆ ನೀಡಿ, ಗದಗ-ಬೆಟಗೇರಿ ಅವಳಿ ನಗರದಲ್ಲಿ ಹಾಗೂ ಗದಗ ಜಿಲ್ಲೆಯಲ್ಲಿ ಸಾರ್ವತ್ರಿಕ ಚುನಾವಣೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಬ್ಯಾನರ್ಗಳನ್ನು ಅಳವಡಿಸುವಂತೆ ಮನವಿ ಮಾಡಿದರು. ಚುನಾವಣೆ ಜಾಗೃತಿ ಅನೇಕ ವಿಷಯಗಳ ಮಾಹಿತಿ ನೀಡಿದರು.
ಸಂಸ್ಥೆಯ ಉಪಾಧ್ಯಕ್ಷ ದೇವದಾಸ ಕಾಮತ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಗೌರವ ಕಾರ್ಯದರ್ಶಿ ವೀರಣ್ಣ ಬೇವಿನಮರದ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

