ಗದಗ

ಗ್ರಾಮೀಣ ಪ್ರದೇಶದಲ್ಲಿ ಮತದಾರ ಜಾಗೃತಿಗೆ ಕ್ರಮ

Published On :

ಕನ್ನಡಪ್ರಭ ವಾರ್ತೆ, ಗದಗ, ಮಾ. 15
ಜಿಲ್ಲೆಯ ಎಲ್ಲ 109 ಗ್ರಾಮ ಪಂಚಾಯಿತಿಗಳ ಯೋಜನಾಧಿಕಾರಿಗಳ (ಪಿಡಿಒ) ಸಭೆಯು ಗದಗ ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಜರುಗಿತು.
ಗದಗ ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ವೀರಣ್ಣ ತುರಮರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಏಪ್ರಿಲ್ 17ರಂದು ನಡೆವ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಗ್ರಾಮಗಳಲ್ಲಿನ ಅರ್ಹ ಮತದಾರರು ತಪ್ಪದೇ ಮತ ಚಲಾಯಿಸುವ ನಿಟ್ಟಿನಲ್ಲಿ ಹಾಗೂ ಹೊಸದಾಗಿ ಬಂದಿರುವ ಮತ ಯಂತ್ರಗಳ ಕುರಿತು ಮತದಾರರ ಜಾಗೃತಿ ಸಮಿತಿಗಳ ನೆರವಿನೊಂದಿಗೆ ಅಗತ್ಯ ಎಲ್ಲ ಪ್ರಚಾರ, ಮಾಹಿತಿ ಕ್ರಮವನ್ನು ಪ್ರಥಮಾದ್ಯತೆಯೊಂದಿಗೆ ಕೈಕೊಳ್ಳಲು ತಿಳಿಸಿದರು.
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಲೋಕಸಭೆ ಚುನಾವಣೆ-2014 ತಪ್ಪದೇ ಮತದಾನ ಚಲಾಯಿಸಿ ಸಂದೇಶದ ಕನಿಷ್ಠ 10 ಬ್ಯಾನರ್‌ಗಳನ್ನು ಜನನಿಬಿಡ ಪ್ರದೇಶಗಳಲ್ಲಿ ಏಪ್ರಿಲ್ 17ರ ವರೆಗೆ ಪ್ರದರ್ಶಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ್ ಗ್ರಾಮೀಣ ಪ್ರದೇಶದ ಅರ್ಹ ಯುವಜನರು ಸೇರಿದಂತೆ ಎಲ್ಲ ಮತದಾರರು ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸುವಂತೆ ಪ್ರೇರೇಪಿಸಬೇಕು. ಕಳೆದ ಚುನಾವಣೆಯಲ್ಲಿ ಶೇ. 50ಕ್ಕಿಂತ ಕಡಿಮೆ ಮತದಾನವಾಗಿರುವ ಪ್ರದೇಶಕ್ಕೆ ಪಿಡಿಒ ನೇತೃತ್ವದ ತಂಡ ನಿಯಮಿತವಾಗಿ ಭೇಟಿ ನೀಡಿ ಮತದಾರರ ಮನ ಒಲಿಸುವ ಪ್ರಯತ್ನ ಮಾಡಬೇಕು. ಬೇಸಿಗೆ ಇರುವುದರಿಂದ ವ್ಯಾಪ್ತಿಯ ಮತದಾನ ಕೇಂದ್ರಗಳಲ್ಲಿ ಏಪ್ರಿಲ್ 17ರಂದು ನೆರಳು, ನೀರಿನ ಪೂರೈಕೆಗೆ ಕ್ರಮ ಕೈಕೊಳ್ಳಬೇಕು ಎಂದು ತಿಳಿಸಿದರು. ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆಯಾಗಿ ಬೇಸಿಗೆ ಸಮಯದಲ್ಲಿ ಪ್ರತಿ ಗ್ರಾಮದ ಸ್ವಚ್ಛ ಕಾರ್ಯ ನಿಯಮಿತವಾಗಿ ಆಗಬೇಕು. ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ ಆ ಕುರಿತ ಸಮಸ್ಯೆಗಳು ಬರದಂತೆ ಸೂಕ್ತ ಮುಂಜಾಗ್ರತಾ ಕ್ರಮ ಜರುಗಿಸಲು ನಿರ್ದೇಶಿಸಿದರು. ಗ್ರಾಮೀಣ ಪ್ರದೇಶದಲ್ಲಿ ಕೈಕೊಳ್ಳಲಾಗುತ್ತಿರುವ ಮತದಾರ ಜಾಗೃತಿ ಸ್ವೀಪ್ ಕ್ರಿಯಾ ಯೋಜನೆ ಕುರಿತು ಜಿಪಂ ಯೋಜನಾ ನಿರ್ದೇಶಕ ಟಿ. ದಿನೇಶ ವಿವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.