ಗದಗ

ವಿಜ್ಞಾನ-ತಂತ್ರಜ್ಞಾನ ಎಲ್ಲರಿಗೂ ತಿಳಿಯಲಿ: ಪ್ರಾ. ಸಂಕನೂರ

Published On :

ಕನ್ನಡಪ್ರಭ ವಾರ್ತೆ, ಗದಗ, ಮಾ. 18
ವಿಜ್ಞಾನ ಮತ್ತು ತಂತ್ರಜ್ಞಾನ ಪಠ್ಯಪುಸ್ತಕ, ವಿದ್ಯಾರ್ಥಿಗಳು ಹಾಗೂ ವಿಜ್ಞಾನ ಶಿಕ್ಷಕರಿಗೆ ಮಾತ್ರ ಸೀಮಿತವಾಗದೆ ಪ್ರತಿಯೊಬ್ಬ ಜನಸಾಮಾನ್ಯರ ಬಳಿ ಕೊಂಡೊಯ್ದಾಗ ಮಾತ್ರ ಸಾರ್ಥಕತೆ ಪಡೆಯುತ್ತದೆ ಎಂದು ವಿಜ್ಞಾನ ಪರಿಷತ್ ರಾಜ್ಯಾಧ್ಯಕ್ಷ, ಪ್ರಾಚಾರ್ಯ ಎಸ್.ವಿ. ಸಂಕನೂರ ಹೇಳಿದರು.
ನಗರದ ವೀರನಾರಾಯಣ ಕಲ್ಯಾಣ ಕೇಂದ್ರದಲ್ಲಿ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಘಟಕ ಆಶ್ರಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ 'ನಿಮ್ಮ ಬಳಿಗೆ ವಿಜ್ಞಾನ' ಎಂಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉಪನ್ಯಾಸಕರಾಗಿ ಆಗಮಿಸಿದ್ದ ಡಾ. ಉಮೇಶ ಪುರದ ಅವರು ನಿತ್ಯ ಜೀವನದಲ್ಲಿ ಆಯುರ್ವೇದ ಕುರಿತು ಮಾತನಾಡಿ, ನಿತ್ಯ ಜೀವನದಲ್ಲಿ ಬಳಸುವ ಜೀರಿಗೆ, ಸಾಸಿವೆ, ಅರಷಿಣ, ಶುಂಠಿ, ಬೆಳ್ಳುಳ್ಳಿ, ಇಂಗು ಮುಂತಾದವುಗಳು ಆರೋಗ್ಯಕ್ಕೆ ಪೂರಕವಾಗಿವೆ ಮತ್ತು ಔಷಧೀಯ ಗುಣ ಹೊಂದಿವೆ ಎಂದರು.
ಅತಿಥಿಗಳಾಗಿ ಆಗಮಿಸಿದ್ದ ಅಕ್ಷರ ದಾಸೋಹದ ಶಿಕ್ಷಣಾಧಿಕಾರಿ ಎಂ.ಬಿ. ತಾಪಸ್ಕರ ಮಾತನಾಡಿ, ನಾವು ಇಂದಿನ ವಿಜ್ಞಾನ ಯುಗದಲ್ಲಿ ಮೂಢನಂಬಿಕೆಗಳಿಗೆ ಮಾರು ಹೋಗಿರುವುದು ವಿಷಾದನೀಯ. ಈ ಕುರಿತು ಸಾರ್ವಜನಿಕರು ಜಾಗೃತಿ ಹೊಂದುವಂತೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಎ.ಎಸ್.ಎಸ್. ಕಾಮರ್ಸ್ ಪಿಯು ಕಾಲೇಜಿನ ಪ್ರಾಚಾರ್ಯ ವಸುಧಾ ಸೊರಟೂರು ಪ್ರಾಸ್ತಾವಿಕ ಮಾತನಾಡಿದರು. ಉಪಾಧ್ಯಕ್ಷ ಅನ್ನದಾನಿ ಹಿರೇಮಠ, ಖಜಾಂಚಿ ಜಿ.ವಿ. ಟೊಣಪಿ ಮುಂತಾದವರು ಉಪಸ್ಥಿತರಿದ್ದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎನ್.ವಿ. ಜೋಷಿ ಸ್ವಾಗತಿಸಿದರು. ಭಾಗ್ಯ ಶ್ರೀ ಜೋಷಿ ಪ್ರಾರ್ಥಿಸಿದರು. ಡಾ. ಪರಿಮಳಾ ದೇಶಪಾಂಡೆ ನಿರೂಪಿಸಿದರು. ವಿ.ಆರ್. ಪುರಾಣಿಕ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.