ಗದಗ

ವಿದ್ಯಾರ್ಥಿಗಳಲ್ಲಿ ಪ್ರಗತಿ ಚಿಂತನೆ ಅಗತ್ಯ: ಮಾನ್ವಿ

Published On :

ಗದಗ: ವಿದ್ಯಾರ್ಥಿಗಳಲ್ಲಿ ಪ್ರಗತಿಯ ಚಿಂತನೆ ಅತ್ಯಂತ ಅವಶ್ಯಕ ಎಂದು ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಇಮ್ತಿಯಾಜ್ ಮಾನ್ವಿ ಹೇಳಿದರು.
ಅವರು ಈಚೆಗೆ ಸ್ಲಂ ಜನಾಂದೋಲನ ಕರ್ನಾಟಕ, ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿಯ ಯುವ ಘಟಕದಿಂದ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಬಿಡಿಸುವ ಕಾರ್ಯಾಗಾರದಲ್ಲಿ ಮಾತನಾಡಿದರು.
ಯಾವುದನ್ನಾದರೂ ಸಾಧಿಸಬೇಕಾದರೆ ಮೊದಲು ಸ್ಪರ್ಧಾಜೀವಿಗಳಾಗಿರಬೇಕು. ಅದರಂತೆ ರೂಪಗೊಂಡು ಆ ಕಡೆಗೆ ಗಮನ ಹರಿಸಿದಾಗ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧ್ಯ ಎಂದರು.
ಉಪಾಧ್ಯಕ್ಷ ಅಶೋಕ ಕುಡತಿನ್ನಿ ಮಾತನಾಡಿದರು. ಜಿ.ವಿ. ಮೆಣಸಿನಕಾಯಿ, ಆರ್.ಎಸ್. ಅರ್ಕಸಾಲಿ, ಅಶೋಕ ಮ್ಯಾಗೇರಿ, ಮಹಿಳಾಧ್ಯಕ್ಷೆ ಉಮಾದೇವಿ ಕಾತರಕಿ, ತಿಪ್ಪವ್ವಾ ಮುಟಗಾರ, ಪರಮೇಶ ಕಾಳೆ, ಸ್ಲಂ ಯುವ ಸಮಿತಿ ಉಪಾಧ್ಯಕ್ಷ ಯಲ್ಲಪ್ಪ ರಾಮಗಿರಿ ಹಾಜರಿದ್ದರು. ಶರೀಫ ಬಿಳೆಯಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಸವರಾಜ ಬಿಳೆಯಲಿ, ಸಲಿಮ್ ಬಳ್ಳಾರಿ, ರಾಜು ಭರಮಣ್ಣವರ, ಅಜೀಜ ಕಾಗದಗಾರ, ಪ್ರಶಾಂತ ರಾಯಬಾಗಿ ಹಾಗೂ ಗದಗ ಬೆಟಗೇರಿ ನಗರದ ಸ್ಲಂ ಪ್ರದೇಶದ ವಿವಿಧ ಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರಶುರಾಮ ಕಾಳೆ ನಿರೂಪಿಸಿದರು. ಅನಿಲ ಕಾಳೆ ವಂದಿಸಿದರು.
--
ನಾಳೆ ರೇಣುಕಾಚಾರ್ಯ ಜ್ಯೋರ್ತಿಲಿಂಗ ಜಾತ್ರೆ
ಗಜೇಂದ್ರಗಡ: ಸಮೀಪದ ಕೊಡಗಾನೂರ ಗ್ರಾಮದ ರೇಣುಕಾಚಾರ್ಯ ಜ್ಯೋರ್ತಿಲಿಂಗ ಜಾತ್ರಾ ಮಹೋತ್ಸವ ಮಾ. 20ರಂದು ನಡೆಯಲಿದೆ. ಹಾಲಕೇರೆಯ ಅಭಿನವ ಅನ್ನದಾನ ಸ್ವಾಮೀಜಿ, ಕುದುರಿಮೋತಿಯ ವಿಜಯಮಹಾಂತ ಸ್ವಾಮೀಜಿ, ಕೊಪ್ಪಳ ಗವಿ ಮಠದ, ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ, ಚಳಗೇರಿಯ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ, ಸೂಡಿ ಜುಕ್ತಿಹಿರೇಮಠದ ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ, ಯಲಬುರ್ಗಾ ಧರಮುರಡಿ ಮಠದ ಬಸವಲಿಂಗೇಶ್ವರ ಸ್ವಾಮೀಜಿ, ನರೇಗಲ್ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಜಿಗೇರಿಯ ಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಕೊಡಗಾನೂರಿನ ರುದ್ರಮುನಿ ದೇವರು ಹಿರೇಮಠರ ಸಾನ್ನಿಧ್ಯದಲ್ಲಿ ಧರ್ಮ ಸಭೆ ನಡೆಯಲಿದೆ. ಇದಕ್ಕೂ ಮುನ್ನ ಬೆಳಗ್ಗೆ 5ಕ್ಕೆ ರೇಣುಕಾಚಾರ್ಯರ ಕರ್ತೃ ಗದ್ದುಗೆಗೆ ಮಹಾ ರುದ್ರಾಭಿಷೇಕ, ಅಯ್ಯಾಚಾರ, ಹೋಮ, ನವಗ್ರಹ ಪೂಜೆ, 12ಕ್ಕೆ ಧರ್ಮಸಭೆ, 1ಕ್ಕೆ ಸಾಮೂಹಿಕ ಅನ್ನಸಂತರ್ಪಣೆ ಬಳಿಕ 4.30ಕ್ಕೆ ಸಕಲ ಮಂಗಲ ವಾದ್ಯಗಳೊಂದಿಗೆ ಪಂಚ ಕಳಸದ ಮಹಾರಥೋತ್ಸವ, ನಂತರ 5001 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ. ನಂತರ ರಾತ್ರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ ಎಂದು ಜಾತ್ರಾ ಮಹೋತ್ಸವ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.